ಕೊಡಗು

ಆಟೋ ಬಾಡಿಕೆ ರೂ.40 ; ಪ್ರಾಯಾಣಿಕ ಗೂಗಲ್‌ ಪೇ ಮಾಡಿದ್ದು 34 ಸಾವಿರ !

ಮಡಿಕೇರಿ: ಆಟೋ ರಿಕ್ಷಾದಲ್ಲಿ ಪ್ರಯಾಣಿಕರೊಬ್ಬರು ತಾನು ಪ್ರಯಾಣಿಸಿದ 2 ಕಿ.ಮೀ. ಅಂತರದ ಪ್ರಯಾಣಕ್ಕೆ 40 ರೂ. ಪವಾತಿಸುವ ಬದಲಿಗೆ ತಮಗರಿವಿಲ್ಲದೇ ಗೂಗಲ್ ಪೇ ಮಾಡಿದ್ದ 34 ಸಾವಿರ ರೂ.ಗಳನ್ನು ಹಿಂತಿರುಗಿಸುವ ಮೂಲಕ ಮಡಿಕೇರಿಯ ಆಟೋ ಚಾಲಕ ಸತೀಶ್ ಹಾಗೂ ಆಟೋ ಮಾಲೀಕರ, ಚಾಲಕರ ಸಂಘದವರು ಪ್ರಾಮಾಣಿಕತೆ ಮೆರೆದಿದ್ದಾರೆ.

ಜೂ.11ರಂದು ಎಮ್ಮೆಮಾಡು ನಿವಾಸಿ ಆಲಿ ಎಂಬವರು ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿಯಿಂದ ಆಟೋ ಏರಿ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಇಳಿದಿದ್ದಾರೆ. ಅವರು ಆಟೋ ಬಾಡಿಗೆ 40 ರೂ.ನೀಡಬೇಕಿತ್ತು. ಆದರೆ ಅವರ ಬಳಿ ಹಣವಿರದ ಕಾರಣ ಬಾಡಿಗೆಯ ಹಣ ಸೇರಿಸಿ 500 ರೂ. ಗೂಗಲ್ ಪೇ ಮಾಡುವುದಾಗಿ ಹೇಳಿ ಬಾಡಿಗೆ ಹಣ ಕಳೆದು ಉಳಿದ 460 ರೂ. ಕ್ಯಾಶ್ ನೀಡುವಂತೆ ಕೇಳಿಕೊಂಡಿದ್ದಾರೆ. ತನ್ನ ಬಳಿ ಅಷ್ಟು ಹಣ ಇಲ್ಲದಿರುವುದರಿಂದ 340 ರೂ. ಗೂಗಲ್ ಪೇ ಮಾಡುವಂತೆ ಹೇಳಿದ ಚಾಲಕ ಸತೀಶ್ 300 ರೂ.ಗಳನ್ನು ಕೊಟ್ಟಿದ್ದಾರೆ. ಆದರೆ ಆಲಿಯವರು 340 ರೂ. ಗಳನ್ನು ಗೂಗಲ್ ಪೇ ಮಾಡುವ ಬದಲಾಗಿ ತನಗೆ ಅರಿವಿಲ್ಲದೆ 34.000 ರೂ.ಗಳನ್ನು ಚಾಲಕನಿಗೆ ಗೂಗಲ್ ಪೇ ಮಾಡಿದ್ದಾರೆ. ನಂತರ ಇಬ್ಬರೂ ಅಲ್ಲಿಂದ ಹೊರಟು ಹೋಗಿದ್ದಾರೆ.

ಇದಾದ ಸ್ವಲ್ಪ ಹೊತ್ತಿನ ಬಳಿಕ ಟ್ರಾನ್ಸಾಕ್ಷನ್ ಪರಿಶೀಲಿಸಿದ ಚಾಲಕ ಸತೀಶ್ ಅವರಿಗೆ ವಿಷಯ ಗಮನಕ್ಕೆ ಬಂದಿದೆ. ಆಲಿಯವರನ್ನು ಸಂಪರ್ಕಿಸಲು ಸಂಪರ್ಕ ಸಂಖ್ಯೆ ಸ್ಕ್ಯಾನರ್‌ನಲ್ಲಿ ಕೂಡ ಸಿಗದ ಕಾರಣ ಅವರನ್ನು ಸಂಪರ್ಕಿಸಲು ಕಷ್ಟವಾಗಿತ್ತು. ಹಾಗೆಯೇ ಹೆಚ್ಚುವರಿ ಹಣ ನೀಡಿದ ವಿಷಯ ಆಲಿಯವರಿಗೆ ಜೂ.12ರ ಮಧ್ಯಾಹ್ನದವರೆಗೂ ಗಮನಕ್ಕೆ ಬಂದಿರಲಿಲ್ಲ.

ಬ್ಯಾಂಕಿಗೆ ಬಂದು ಪಾಸ್ ಪುಸ್ತಕ ಪರಿಶೀಲಿಸಿದಾಗ 34.000 ರೂ.ಗಳನ್ನು ಹಿಂದಿನ ದಿನ ಆಟೋ ಚಾಲಕನಿಗೆ ನೀಡಿರುವುದು ಗೋಚರಿಸಿದೆ. ಈ ಕುರಿತು ಆಟೋ ಮಾಲೀಕರ, ಚಾಲಕರ ಸಂಘಕ್ಕೆ ಮಾಹಿತಿ ನೀಡಿದ ಮೇರೆಗೆ ಸಂಘದ ಮುಖೇನ ಮಾಹಿತಿಯನ್ನು ಗ್ರೂಪ್‌ನಲ್ಲಿ ಶೇರ್ ಮಾಡಲಾಗಿತ್ತು. ಇತರೆ ಚಾಲಕರು ಜೂ.11ರಂದು ನಡೆದ ಘಟನೆಯ ಬಗ್ಗೆ ಚಾಲಕ ಸತೀಶ್ ತಮ್ಮ ಬಳಿ ತಿಳಿಸಿರುವುದಾಗಿ ಸಂಘದವರಲ್ಲಿ ಮಾಹಿತಿ ನೀಡಿದ್ದಾರೆ.

ಸಂಘದಿಂದ ಚಾಲಕ ಸತೀಶ್‌ರವರನ್ನು ಸಂಪರ್ಕಿಸಿ ಘಟನೆಯ ಸಂಪೂರ್ಣ ಮಾಹಿತಿ ಕಲೆ ಹಾಕಲಾಗಿತ್ತು. ಜೂ.11ರಂದೇ ಆಲಿರವರ ಖಾತೆಗೆ 1 ರೂ. ಗೂಗಲ್ ಪೇ ಮಾಡಿ ಅವರದ್ದೇ ಖಾತೆ ಎಂದು ಖಾತರಿ ಪಡಿಸುವಂತೆ ಮೆಸೇಜ್ ಮಾಡಿರುವುದಾಗಿ ಚಾಲಕ ಸತೀಶ್ ಸ್ಪಷ್ಟಪಡಿಸಿದ್ದಾರೆ. ಆದರೆ ಆಲಿ ಅವರು ಅದನ್ನೂ ಗಮನಿಸಿರಲಿಲ್ಲ.

ಆಂದೋಲನ ಡೆಸ್ಕ್

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

8 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

8 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

8 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

8 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

9 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

9 hours ago