ಕೊಡಗು

ಕೊಡಗಿನಲ್ಲಿ ವರುಣನ ಆರ್ಭಟ : ಜಿಲ್ಲೆಯಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ

ಮಡಿಕೇರಿ : ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿರುವ ಹಿನ್ನೆಲೆ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ.ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ರಸ್ತೆ ಕುಸಿತ ತಡೆಯುವ ದೃಷ್ಠಿಯಿಂದ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಬ್ರೇಕ್‌ ಹಾಕಿದ್ದಾರೆ. ಮರಳು ಸಾಗಾಣಿಕೆ, ಮರದ ದಿಮ್ಮಿ ಸಾಗಾಣಿಕೆಯ ಲಾರಿಗಳಿಗೆ ನಿಷೇಧಿಸಲಾಗಿದೆ. ೧೮೫೦೦ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಡಿಸಿ ನಿಷೇಧ ಹೇರಿದ್ದಾರೆ.

ಈಗಾಗಲೇ ಜಿಲ್ಲೆಯ ಗಡಿಗಳಲ್ಲಿ ೨೪ ಗಂಟೆಯೂ ನಿಗಾ ಇಡಲಾಗಿದ್ದು, ಸಾರಿಗೆ ಪೊಲೀಸ್‌ ಸಿಬ್ಬಂದಿ  ಹೆದ್ದಾರಿಗಳಲ್ಲಿ ಪೆಟ್ರೋಲಿಂಗ್‌ ನಡೆಸಲಿದ್ದಾರೆ. ಹಾಲು, ಇಂಧನ ಅನಿಲ ಪೂರೈಕೆ ವಾಹನಗಳಿಗೆ ರಿಯಾಯಿತಿ ನೀಡಲಾಗಿದೆ. ಮಳೆಗಾಲ ಮುಗಿಯುವ ತನಕ ಜಿಲ್ಲೆಯಲ್ಲಿ  ಬೃಹತ್‌ ವಾಹನಗಳ ಸಂಚಾರ ನಿಷೇಧವಿರಲಿದ್ದು, ಸದ್ಯ ಜುಲೈ ೧ ರಿಂದ ೩೦ ರವರೆಗೆ ಆದೇಶ ಹೊರಡಿಸಲಾಗಿದೆ

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

4 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

4 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

4 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

4 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

16 hours ago