ಕೊಡಗು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸವಾರ ಸಾವು

ಮಡಿಕೇರಿ: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿ ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಶುವಾರ ತಡರಾತ್ರಿ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ನಡೆದಿದೆ.

ಸವಾರರು ರಾತ್ರಿ ಮಡಿಕೇರಿ ದಸರಾ ವೀಕ್ಷಿಸಿ ಊರಿಗೆ ಹಿಂತಿರುಗುತ್ತಿದ್ದ ಸಂದರ್ಭ ನಿಯಂತ್ರಣ ಕಳೆದುಕೊಂಡು ಬೈಕ್ ವಿದ್ಯುತ್ ಕಂಬಕ್ಕೆ ಬಡಿದಿದೆ. ವಿದ್ಯುತ್ ಕಂಬಕ್ಕೆ ಬೈಕ್ ಅಪ್ಪಳಿಸಿದ ರಭಸಕ್ಕೆ ಸವಾರ ಗಂಭೀರವಾಗಿ ಗಾಯಗೊಂಡು ಉಸಿರು ನಿಲ್ಲಿಸಿದ್ದರೆ, ಹಿಂಬದಿ ಸವಾರನ ಸಮೇತ ಬೈಕ್ ಪಕ್ಕದ ತೋಡಿನೊಳಗೆ ಬಿದ್ದಿದೆ.

ವಿಷಯ ಅರಿತು ಸ್ಥಳಕ್ಕೆ ಧಾವಿಸಿದ್ದ ಸ್ಥಳೀಯರು ತೋಡಿನೊಳಗೆ ಬಿದ್ದಿದ್ದ ಹಿಂಬದಿ ಸವಾರನನ್ನು ರಕ್ಷಿಸಿದ್ದಾರೆ. ಬಳಿಕ ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆ..ಹಾರ!

ಯಾವುದಾದರೂ ಕವನ ವಾಚಿಸಿ, ಏನಾದರೂ ಆಹಾರ ತಿನ್ನಿ ಎಂದವಳು ಹೇಳಿದಳು ಕವಿರಾಯರಿಗೆ ಕಿವಿಮಾತು! ಸಮ್ಮೇಳನದಿಂದ ಬರುವಾಗ ಆ..ಹಾರ, ಶಾಲು, ಸ್ಮರಣಿಕೆಗಳ…

12 mins ago

ಓದುಗರ ಪತ್ರ: ಕನ್ನಡದಲ್ಲಿ ತೀರ್ಪು ನೀಡಿರುವುದು ಸ್ವಾಗತಾರ್ಹ

ಡಿ.೧೨ರಂದು ಹೈಕೋರ್ಟ್ ನ್ಯಾಯಮೂರ್ತಿಗಳಾದ, ಕೃಷ್ಣ ಎಸ್. ದೀಕ್ಷಿತ್ ಮತ್ತು ಸಿ.ಎಂ.ಜೋಶಿ ಅವರ ವಿಭಾಗೀಯ ಪೀಠವು ತುಮಕೂರಿನ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ…

2 hours ago

ಓದುಗರ ಪತ್ರ: ಉಳ್ಳವರಿಗೊಂದು ನ್ಯಾಯ, ಜನಸಾಮಾನ್ಯರಿಗೊಂದು ನ್ಯಾಯವೇ?

ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್‌ನನ್ನು ಪೊಲೀಸ್ ವಶಕ್ಕೆ ಪಡೆಯುವಂತೆ ಮುಂಬೈ ನ್ಯಾಯಾಲಯ ಆದೇಶ ನೀಡಿತ್ತು. ಆದರೆ…

2 hours ago

ಸೈಬರ್ ವಂಚನೆಯ ಹೊಸ ಮಾದರಿ ಡಿಜಿಟಲ್ ಅರೆಸ್ಟ್‌

ನಾ.ದಿವಾಕರ ತಂತ್ರಜ್ಞಾನದ ಆವಿಷ್ಕಾರಗಳಿಗೆ ಸಮಾನಾಂತರವಾಗಿ ಬೆಳೆಯುತ್ತಿರುವ ಡಿಜಿಟಲ್ ವಂಚಕ ಜಾಲಗಳು ಕೋವಿಡ್ ೧೯ ವಿಶ್ವದಾದ್ಯಂತ ಜನರ ಬದುಕನ್ನು ಮೂರಾಬಟ್ಟೆ ಮಾಡಿದ…

3 hours ago

ಸಂವಿಧಾನದ ಆಶಯಗಳ ಮೇಲೆ ನಿರಂತರ ಪ್ರಹಾರ

ಡಾ.ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವರು ಸಂವಿಧಾನ ಕುರಿತ ಚರ್ಚೆಯನ್ನು ಪ್ರಧಾನಿಯೇ ರಾಜಕೀಯಗೊಳಿಸುವ ಪ್ರಯತ್ನ ಮಾಡಿದ್ದು ಸರಿಯಲ್ಲ ದೇಶದ ಸಂವಿಧಾನ ೭೫…

3 hours ago

ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿದ ಕೊಳ ನಿರುಪಯುಕ್ತ; ಭಕ್ತರಲ್ಲಿ ನಿರಾಸೆ

ಎಂ.ಬಿ.ರಂಗಸ್ವಾಮಿ ಮೂಗೂರು: ೩ ವರ್ಷಗಳಿಂದ ಸ್ಥಗಿತಗೊಂಡಿರುವ ತೆಪ್ಪೋತ್ಸವ  ಮೂಗೂರು: ಗ್ರಾಮದ ಶ್ರೀ ತ್ರಿಪುರ ಸುಂದರಿ ಅಮ್ಮನವರ ದೇವಾಲಯದಲ್ಲಿ ಕೋಟ್ಯಂತರ ರೂ.…

4 hours ago