ಮಡಿಕೇರಿ: ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯಲ್ಲಿ ಇತ್ತೀಚಿಗೆ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಂಬಿಬಾಣೆಯ ಚಿರಾಗ್ ಎಂಬುವರ ಬೈಕ್ ಕಳ್ಳತನವಾಗಿತ್ತು. ಯುವಕನೊಬ್ಬ ಅದನ್ನು ಕದ್ದು ತಳ್ಳಿಕೊಂಡು ಹೋಗುತ್ತಿದ್ದುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು
ಕಾರ್ಯಾಚರಣೆಗಿಳಿದಾಗ ಸೋಮವಾರಪೇಟೆ ದೊಡ್ಡಮಳ್ತೆ ನಿವಾಸಿ ಚಂದನ್ (29) ಎಂಬಾತ ಬೈಕ್ ಅನ್ನು ಕಳ್ಳತನ ಮಾಡಿರುವುದು ಗೊತ್ತಾಗಿದೆ.
ಈ ಕುರಿತು ಖಚಿತ ಮಾಹಿತಿ ಪಡೆದ ಸುಂಟಿಕೊಪ್ಪ ಪಿಎಸ್ ಐ ಚಂದ್ರಶೇಖರ್ ಹಾಗೂ ಅಪರಾಧ ವಿಭಾಗದ ಪಿಎಸ್‌ಐ ಭಾರತಿ ಅವರ ನೇತೃತ್ವದ ತಂಡ ಹೆಚ್.ಡಿ.ಕೋಟೆಯ ಸರಗೂರುವಿನಲ್ಲಿ ಆರೋಪಿ ಚಂದನ್ ನನ್ನು ಬಂಧಿಸಿ ಕಳ್ಳತನವಾಗಿದ್ದ ಬೈಕ್ ಅನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…