Mysore
16
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಕೊಡಗು| ಪ್ರತಿಭಟನೆ ನಡೆಸುತ್ತಿದ್ದ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಪೊಲೀಸ್‌ ವಶಕ್ಕೆ

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್‌ ಶಾಸಕರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಸಂಸದ ಯದುವೀರ್ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸ್ಪೀಕರ್‌ ಕೆ. ಜಿ ಬೋಪಯ್ಯ ಸೇರಿದಂತೆ ಅನೇಕ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿ, ವಿನಯ್‌ ಸೋಮಣ್ಣ ಅಂತ್ಯಕ್ರಿಯೆ ನೆರವೇರಿಸಲು ಮುಂದಾಗಿದ್ದಾರೆ.

ಇನ್ನು ಘಟನಾ ಸ್ಥಳದಲ್ಲಿ 800ಕ್ಕೂ ಅಧಿಕ ಪೊಲೀಸರು ಬೀಡುಬಿಟ್ಟಿದ್ದು, ಕುಶಾಲನಗರ ಪೊಲೀಸ್‌ ಠಾಣೆ ಜಮಾವಣೆಗೊಂಡಿದ್ದಾರೆ.

ಈ ವೇಳೆ ಬಿಜೆಪಿ ನಾಯಕರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರ ವಿರುದ್ಧವೇ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾವುದೇ ಕಾರಣಕ್ಕೂ ನಾವು ಅಂತ್ಯಸಂಸ್ಕಾರ ಮಾಡಲು ಬಿಡುವುದಿಲ್ಲ. ವಿನಯ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊನ್ನಣ್ಣ ಹಾಗೂ ಮಂತರ್‌ ಗೌಡ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರ ಎಂದು ಕಿಡಿಕಾರಿದರು.

Tags:
error: Content is protected !!