ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಸಂಸದ ಯದುವೀರ್ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸ್ಪೀಕರ್ ಕೆ. ಜಿ ಬೋಪಯ್ಯ ಸೇರಿದಂತೆ ಅನೇಕ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿ, ವಿನಯ್ ಸೋಮಣ್ಣ ಅಂತ್ಯಕ್ರಿಯೆ ನೆರವೇರಿಸಲು ಮುಂದಾಗಿದ್ದಾರೆ.
ಇನ್ನು ಘಟನಾ ಸ್ಥಳದಲ್ಲಿ 800ಕ್ಕೂ ಅಧಿಕ ಪೊಲೀಸರು ಬೀಡುಬಿಟ್ಟಿದ್ದು, ಕುಶಾಲನಗರ ಪೊಲೀಸ್ ಠಾಣೆ ಜಮಾವಣೆಗೊಂಡಿದ್ದಾರೆ.
ಈ ವೇಳೆ ಬಿಜೆಪಿ ನಾಯಕರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರ ವಿರುದ್ಧವೇ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾವುದೇ ಕಾರಣಕ್ಕೂ ನಾವು ಅಂತ್ಯಸಂಸ್ಕಾರ ಮಾಡಲು ಬಿಡುವುದಿಲ್ಲ. ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊನ್ನಣ್ಣ ಹಾಗೂ ಮಂತರ್ ಗೌಡ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರ ಎಂದು ಕಿಡಿಕಾರಿದರು.
ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …