Mysore
25
scattered clouds

Social Media

ಸೋಮವಾರ, 09 ಮಾರ್ಚ್ 2026
Light
Dark

ಮಡಿಕೇರಿ| ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಬಿಜೆಪಿ ಪ್ರತಿಭಟನೆ

ಮಡಿಕೇರಿ: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ದಿಢೀರ್‌ ಪ್ರತಿಭಟನೆ ನಡೆಸಿದರು.

ಮಡಿಕೇರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ವಿನಯ್‌ ಸೋಮಯ್ಯ ಅವರು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪೊಲೀಸರು ರಾಜ್ಯ ಸರ್ಕಾರದ ಏಜೆಂಟರಂತೆ ವರ್ತನೆ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರದ್ದು ಕೂಡ ತಪ್ಪಿದೆ ಎಂದು ಗಂಭೀರ ಆರೋಪ ಮಾಡಿದರು.

ಘಟನೆ ನಡೆಯಲು ಇಬ್ಬರು ಕಾಂಗ್ರೆಸ್‌ ಶಾಸಕರು ಹಾಗೂ ಕಾಂಗ್ರೆಸ್‌ ಕಾರ್ಯಕರ್ತ ತನ್ವೀರ್‌ ಮೈನಾ ನೇರ ಕಾರಣರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಆದಷ್ಟು ಬೇಗ ಬಂಧಿಸಿ ವಿನಯ್‌ ಸೋಮಯ್ಯ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಮನು ಮುತ್ತಪ್ಪ, ಮಹೇಶ್ ಜೈನಿ ಸೇರಿದಂತೆ ನೂರಾರು ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ದರು.

 

 

Tags:
error: Content is protected !!