ಮಡಿಕೇರಿ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.
ಮಡಿಕೇರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ವಿನಯ್ ಸೋಮಯ್ಯ ಅವರು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪೊಲೀಸರು ರಾಜ್ಯ ಸರ್ಕಾರದ ಏಜೆಂಟರಂತೆ ವರ್ತನೆ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರದ್ದು ಕೂಡ ತಪ್ಪಿದೆ ಎಂದು ಗಂಭೀರ ಆರೋಪ ಮಾಡಿದರು.
ಘಟನೆ ನಡೆಯಲು ಇಬ್ಬರು ಕಾಂಗ್ರೆಸ್ ಶಾಸಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತ ತನ್ವೀರ್ ಮೈನಾ ನೇರ ಕಾರಣರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಆದಷ್ಟು ಬೇಗ ಬಂಧಿಸಿ ವಿನಯ್ ಸೋಮಯ್ಯ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಮನು ಮುತ್ತಪ್ಪ, ಮಹೇಶ್ ಜೈನಿ ಸೇರಿದಂತೆ ನೂರಾರು ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…