ಕೊಡಗು

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ ಸಮಯದಲ್ಲಿ ಬದಲಾವಣೆ ಆಗಲಿದೆ.

ಮಾರ್ಚ್ 3ರ ಮಂಗಳವಾರ ನಡೆಯುವ ಚಂದ್ರ ಗ್ರಹಣದ ಪ್ರಯುಕ್ತ ಕೊಡಗಿನ ಶ್ರೀ ಓಂಕಾರೇಶ್ವರ ದೇವಾಲಯ, ಶ್ರೀ ಆಂಜನೇಯ ದೇವಾಲಯ ಹಾಗೂ ಶ್ರೀ ಕೋಟೆ ಗಣಪತಿ ದೇವಾಲಯದಲ್ಲಿ ದೇವರ ದರ್ಶನ ಹಾಗೂ ವಿವಿಧ ಸೇವೆಯಲ್ಲಿ ವ್ಯತ್ಯಯ ಮಾಡಲಾಗಿದೆ. ಗ್ರಹಣದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಧಾರ್ಮಿಕ ಕ್ರಮ ಅನುಸರಿಸಲಾಗುತ್ತಿದ್ದು, ಭಕ್ತರು ಸಹಕರಿಸಬೇಕಾಗಿ ಕೋರಿಕೊಳ್ಳಲಾಗಿದೆ.

ಮಾರ್ಚ್ 3ರಂದು ಬೆಳಿಗ್ಗೆ 7:30 ರಿಂದ ಬೆಳಿಗ್ಗೆ 9:00 ರವರೆಗೆ ಮಾತ್ರ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುತ್ತದೆ. ಬೆಳಿಗ್ಗೆ 9:00 ಗಂಟೆಗೆ ಮಹಾ ಪೂಜೆ ನಡೆಯಲಿದ್ದು, ತದನಂತರ ದೇವಾಲಯವನ್ನು ಗ್ರಹಣ ಪ್ರಯುಕ್ತ ಮುಚ್ಚಲಾಗುವುದು. ಸಂಜೆ 6:48ರ ಗ್ರಹಣ ಮೋಕ್ಷದ ನಂತರ ದೇವಾಲಯವನ್ನು ತೆರೆಯಲಾಗುವುದು. (ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ) ರಾತ್ರಿ 8 ಗಂಟೆಗೆ ಮಹಾಪೂಜೆಯಲ್ಲಿ ಭಕ್ತರಿಗೆ ಪಾಲ್ಗೊಳ್ಳಲು ಅವಕಾಶವಿದೆ. ನಂತರ ದೇವಾಲಯ ಮುಚ್ಚಲಾಗುತ್ತದೆ.

ಈ ಕುರಿತು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ದುಬಾರಿಯಾಗಲಿದೆ ಡ್ರೈಫ್ರೂಟ್ಸ್‌

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌…

6 seconds ago

ಬರಿಗೈಯಲ್ಲಿ ಚರಂಡಿ ಸ್ವಚ್ಛ ಮಾಡಿದ ಪೌರಕಾರ್ಮಿಕರು

ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…

7 mins ago

ಮಾರ್ಚ್.‌10ರ ಬಳಿಕ ಐದು ರಾಜ್ಯಗಳ ಚುನಾವಣಾ ವೇಳಾಪಟ್ಟಿ ಪ್ರಕಟ.?

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲು…

13 mins ago

ಓದುಗರ ಪತ್ರ: ಲಂಚದ ಹಾವಳಿಗೆ ಕಡಿವಾಣ ಹಾಕಿ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ಮಿತಿ ಮೀರಿದೆ. ಉಳ್ಳವರು ಲಂಚ ಕೊಟ್ಟು ತಮ್ಮ ಕೆಲಸವನ್ನು ಮಾಡಿಸಿಕೊಳ್ಳುತ್ತಾರೆ. ಆದರೆ…

16 mins ago

ಓದುಗರ ಪತ್ರ: ಗ್ಯಾರಂಟಿ ಯೋಜನೆಗೆ ಪರಿಶಿಷ್ಟರ ಮೀಸಲು ಹಣ ಬಳಸಬೇಡಿ

ಮಾರ್ಚ್ ೬ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೬-೨೭ ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಈ ಬಾರಿಯ ಆಯವ್ಯದಲ್ಲಿ ಪರಿಶಿಷ್ಟ ಜಾತಿ…

18 mins ago

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಚಾಮರಾಜನಗರದ ಅಗ್ರಹಾರ ಮೊದಲಾದ ಪ್ರದೇಶದಲ್ಲಿರುವ ಚರಂಡಿಗಳಲ್ಲಿ ಹೂಳು ತುಂಬಿದ್ದು, ಸ್ವಚ್ಛತೆ ಇಲ್ಲದೆ ಸೊಳ್ಳೆ, ನೊಣಗಳ ಹಾವಳಿ ತೀವ್ರವಾಗಿದ್ದು, ರೋಗ ಭೀತಿಯುಂಟಾಗಿದೆ.…

20 mins ago