ಕೊಡಗು

ಗೋಣಿಕೊಪ್ಪಲಿನಲ್ಲಿ ದಿಢೀರ್ ಕಟ್ಟಡ ಕುಸಿತ: ಹಲವರು ಸಿಲುಕಿಕೊಂಡ ಶಂಕೆ; ರಕ್ಷಣಾ ಕಾರ್ಯಾಚರಣೆ ಚುರುಕು

ಮಡಿಕೇರಿ: ಗೋಣಿಕೊಪ್ಪಲು ಮುಖ್ಯ ರಸ್ತೆಯಲ್ಲಿರುವ ಅಂಬೂರ್ ಬಿರಿಯಾನಿ ಮಳಿಗೆ ಇದ್ದ ಕಟ್ಟಡ ದಿಢೀರನೇ ಕುಸಿದು ಬಿದ್ದಿದ್ದು, ಮೂವರನ್ನು ರಕ್ಷಿಸಲಾಗಿದೆ. ಇನ್ನೂ ಮೂವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ತೀರಾ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡದ ಒಂದು ಭಾಗದಲ್ಲಿ ಅಂಬುರ್ ಬಿರಿಯಾನಿ ಹೋಟೆಲ್, ಮತ್ತೊಂದು ಭಾಗದಲ್ಲಿ ಮಟನ್ ಸ್ಟಾಲ್ ಅಂಗಡಿ ಇತ್ತು. ಗುರುವಾರ ಮಧ್ಯಾಹ್ನದ ವೇಳೆಗೆ ಕಟ್ಟಡ ಸಂಪೂರ್ಣವಾಗಿ ನೆಲಸಮಗೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಆಗಮಿಸಿ, ಜೆಸಿಬಿ ಹಾಗೂ ಸಾರ್ವಜನಿಕರ ಸಹಕಾರದಲ್ಲಿ ರಕ್ಷಣಾ ಕಾರ್ಯಚರಣೆ ನಡೆಸಲಾಗುತ್ತಿದೆ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

12 mins ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

36 mins ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

2 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

3 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

3 hours ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

3 hours ago