ಗೋಣಿಕೊಪ್ಪಲು: ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಕರುವಿನ ಮೇಲೆ ಹುಲಿ ದಾಳಿ ನಡೆಸಿ ಬಲಿ ಪಡೆದ ಘಟನೆ ಶ್ರೀಮಂಗಲ ಬಳಿಯ ಕುಮಟೂರಿನಲ್ಲಿ ನಡೆದಿದೆ.
ಕುಮಟೂರಿನ ಕಳ್ಳೆಂಗಡೆ ಪೂವಯ್ಯ ಅವರಿಗೆ ಸೇರಿದ 2 ವರ್ಷದ ಕರು ಬಲಿಯಾದದ್ದು. ಹುಲಿ ಕರುವನ್ನು ಕೊಂದು ಕಾಫಿ ತೋಟದ ಒಳಗೆ ಎಳೆದೊಯ್ದಿದೆ. ಮಾಲೀಕ ಪೂವಯ್ಯ ಕರುವನ್ನು ಹುಡುಕತೊಡಗಿದಾಗ ಬುಧವಾರ ಬೆಳಿಗ್ಗೆ ಕಾಫಿ ತೋಟದಲ್ಲಿ ಕರು ಸತ್ತು ಬಿದ್ದಿರುವುದು ಗೋಚರಿಸಿದೆ.
ಹುಲಿಯ ಚಲನವಲನವನ್ನು ಕಂಡು ಹಿಡಿಯಲು ಸ್ಥಳದಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ. ಸೆರೆ ಹಿಡಿಯಲು ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಕುಟ್ಟ ಉಪವಲಯ ಅರಣ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ಕುಟ್ಟ ಪಶುವೈಧ್ಯಾಧಿಕಾರಿ ಗಿರೀಶ್ ಮರಣೋತ್ತರ ಪರೀಕ್ಷೆ ನಡೆಸಿದರು. ಪೊನ್ನಂಪೇಟೆ ಡಿಆರ್‌ಎಫ್‌ಒ ದಿವಾಕರ್, ಗುರುನಾಥ್, ಆರ್‌ಆರ್‌ಟಿ ತಂಡದ ರಂಜು, ಹರೀಶ್, ರಂಜಿತ್, ಸಂಜಯ್, ವಿನು, ಭವನ್, ಸುಬ್ರಮಣಿ ಪಾಲ್ಗೊಂಡಿದ್ದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…