ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ನುಗ್ಗಿದ ಪರಿಣಾಮ ಕೊಡಗು ಮೂಲದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜರಾಯಪಟ್ಟಣದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಗೆ ನುಗ್ಗಿದ ಪರಿಣಾಮ ಮನೆಯ ಮುಂಭಾಗ ಸಂಪೂರ್ಣ ಹಾನಿಯಾಗಿದ್ದಲ್ಲದೇ, ಕಾರಿನ ಮುಂಭಾಗವೂ ನಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದ ಕೊಡಗು ಮೂಲದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಕಾರಿನಲ್ಲಿದ್ದವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಜೆಸಿಬಿ ಕಾರನ್ನು ಮೇಲಕ್ಕೆತ್ತಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





