ಕೊಡಗು

ಕೊಡಗು| ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು: ಪ್ರಯಾಣಿಕರಿಗೆ ಗಂಭೀರ ಗಾಯ

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ನುಗ್ಗಿದ ಪರಿಣಾಮ ಕೊಡಗು ಮೂಲದ ಪ್ರಯಾಣಿಕರಿಗೆ ಗಂಭೀರ  ಗಾಯಗಳಾಗಿರುವ ಘಟನೆ ನಂಜರಾಯಪಟ್ಟಣದಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಗೆ ನುಗ್ಗಿದ ಪರಿಣಾಮ ಮನೆಯ ಮುಂಭಾಗ ಸಂಪೂರ್ಣ ಹಾನಿಯಾಗಿದ್ದಲ್ಲದೇ, ಕಾರಿನ ಮುಂಭಾಗವೂ ನಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದ ಕೊಡಗು ಮೂಲದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಕಾರಿನಲ್ಲಿದ್ದವರನ್ನು ಆಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಜೆಸಿಬಿ ಕಾರನ್ನು ಮೇಲಕ್ಕೆತ್ತಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

42 mins ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

56 mins ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

1 hour ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

1 hour ago

ಎಲ್‌ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ದೃಢಿಕರಣ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…

1 hour ago

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

2 hours ago