Mysore
26
overcast clouds

Social Media

ಶುಕ್ರವಾರ, 24 ಜುಲೈ 2026
Light
Dark

ಮಡಿಕೇರಿ| 20 ಅಡಿ ಆಳದ ಗದ್ದೆಗೆ ಉರುಳಿದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ.

ಅಪ್ಪಂಗಳ ನಿವಾಸಿ ಸಾಗರ್‌ ಎಂಬುವವರು ಮಡಿಕೇರಿ ಮಾರ್ಗದಿಂದ ಬರುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿದೆ. ಬೆಟ್ಟಗೇರಿ-ಮಡಿಕೇರಿ ಮುಖ್ಯರಸ್ತೆಯ ಹಂಪ್ಸ್‌ ಬಳಿಯ ರಸ್ತೆ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ರಸ್ತೆ ಬದಿಯ 20 ಅಡಿ ಆಳದ ಗದ್ದೆಗೆ ಉರುಳಿ ಬಿದ್ದು ಸಂಪೂರ್ಣ ಜಖಂಗೊಂಡಿದೆ.

ಕಾರಿನಲ್ಲಿದ್ದ ಚಾಲಕ ಸಾಗರ್‌ ಹಾಗೂ ಅವರ ತಾಯಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನೊಳಗೆ ಸಿಲುಕಿದ್ದ ತಾಯಿ ಮತ್ತು ಮಗನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Tags:
error: Content is protected !!