ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ.
ಅಪ್ಪಂಗಳ ನಿವಾಸಿ ಸಾಗರ್ ಎಂಬುವವರು ಮಡಿಕೇರಿ ಮಾರ್ಗದಿಂದ ಬರುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿದೆ. ಬೆಟ್ಟಗೇರಿ-ಮಡಿಕೇರಿ ಮುಖ್ಯರಸ್ತೆಯ ಹಂಪ್ಸ್ ಬಳಿಯ ರಸ್ತೆ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ರಸ್ತೆ ಬದಿಯ 20 ಅಡಿ ಆಳದ ಗದ್ದೆಗೆ ಉರುಳಿ ಬಿದ್ದು ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿದ್ದ ಚಾಲಕ ಸಾಗರ್ ಹಾಗೂ ಅವರ ತಾಯಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನೊಳಗೆ ಸಿಲುಕಿದ್ದ ತಾಯಿ ಮತ್ತು ಮಗನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…