ಕೊಡಗು

ಅರ್ಚಕರ ಮೇಲೆ ಹಲ್ಲೆ ಪ್ರಕರಣ; ಸಹಾಯ ಮಾಡಿದವರ ಬಂಧನ

ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ ಮಾಡಿದ ಆರೋಪಿಗಳು ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಇಬ್ಬರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ವಿರಾಜಪೇಟೆಯ ಕಾವಾಡಿ ಗ್ರಾಮದ ನೆಲ್ಲಮಕ್ಕಡ ಎಂ ಶಿವಪ್ಪ(೫೦), ಮೈತಾಡಿ ಗ್ರಾಮದ ಬೋಳ್ಯಪಂಡ ಎಂ. ಭೀಮಯ್ಯ(೩೮) ಬಂಧಿತ ಆರೋಪಿಗಳು.

ಜ.೨೭ರಂದು ಇಬ್ಬರು ಆರೋಪಿಗಳು ಅರ್ಚಕ ವಿಘ್ನೇಶ್ ಭಟ್ ಎಂಬವರ ಮೇಲೆ ಹಲ್ಲೆ ಮಾಡಿದ್ದು, ಗಾಯಗೊಂಡಿರುವ ವಿಘ್ನೇಶ್ ಭಟ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಹಲವು ಸಂಘಟನೆಗಳು ಖಂಡನೆ ವ್ಯಕ್ತಪಡಿಸಿವೆ.

ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಆರೋಪಿಗಳು ತಲೆಮರೆಸಿಕೊಳ್ಳಲು ಸಹಕಾರ ನೀಡಿದ ಇಬ್ಬರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಶಿವಪ್ಪ ಅವರು ಆರೋಪಿಗಳು ತಪ್ಪಿಸಿಕೊಳ್ಳಲು ತಮ್ಮ ಮಾರುತಿ ೮೦೦ ಕಾರನ್ನು ನೀಡಿದರೆ, ಬೋಳ್ಯಪಂಡ ಭೀಮಯ್ಯ ಅವರು ಆರೋಪಿಗಳು ಕೃತ್ಯವೆಸಗಿ ತೆರಳಿದ ವಾಹನವನ್ನು ತಮ್ಮ ತೋಟದಲ್ಲಿ ಬಚ್ಚಿಡುವಲ್ಲಿ ಸಹಕಾರ ನೀಡಿದ್ದರು. ಆರೋಪಿಗಳಿಗೆ ಸಹಕಾರ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿರುವ ಎಸ್‌ಪಿ ಕೆ ರಾಮರಾಜನ್, ಆರೋಪಿಗಳ ಸಂಬಂಧ ಮಾಹಿತಿ ದೊರೆತಲ್ಲಿ ೦೮೨೭೨-೨೨೮೩೩೦, ೯೪೮೦೮೦೪೯೦೦ ಸಂಖ್ಯೆಗೆ ತಿಳಿಸುವಂತೆ ಮನವಿ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

10 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

11 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

11 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

11 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

11 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

15 hours ago