ಕೊಡಗು

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಕಳೆದ ಕೆಲ ದಿನಗಳಿಂದ ವಿರಾಜಪೇಟೆ ಸಮೀಪದ ಸಿದ್ಧಾಪುರ ಬಳಿ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಉಪಟಳ ನೀಡುತ್ತಿದ್ದ 35 ವರ್ಷ ಪ್ರಾಯದ ಕಾಡಾನೆ ಸೆರೆಗೆ ಬೆಳ್ಳಗ್ಗೆ 6 ಗಂಟೆಯಿಂದಲೇ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಸಿದ್ದಾಪುರ, ಪಾಲಿಬೆಟ್ಟ, ಅಮ್ಮತ್ತಿ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಹುಡುಕಾಟ ನಡೆಸಿದ್ದರು.

ಅಂತಿಮವಾಗಿ ಚೆನ್ನೈನ ಕೋಟೆ ಬಾಡಗ ಬಾಣಂಗಾಲ ಸಮೀಪದ ಕಾಫಿ ತೋಟದಲ್ಲಿ ಪತ್ತೆಯಾದ ಒಂಟಿ ಸಲಗವನ್ನು ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

21 mins ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

1 hour ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

1 hour ago

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…

2 hours ago

ರೀಲ್ಸ್ ಹುಚ್ಚಾಟ, ಕೊರಿಯರ್ ಆಫೀಸಿಗೆ ಅಪ್ಪನನ್ನೇ ಪಾರ್ಸೆಲ್ ತಂದ ಮಂದಿ!

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…

2 hours ago

ಜೆಡಿಎಸ್‌ನಲ್ಲೇ ಇದ್ದೀನಿ, ಪಕ್ಷದಿಂದಲೇ ಸ್ಪರ್ಧೆ : ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…

3 hours ago