ಕೊಡಗು

ಸಂವಿಧಾನ ಬದಲಾಯಿಸುವುದು ಸಂವಿಧಾನ ವಿರೋಧಿ ಬಿಜೆಪಿ ಪರಿವಾರದ ಹುನ್ನಾರ: ಸಿದ್ದರಾಮಯ್ಯ ಎಚ್ಚರಿಕೆ

  • ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ: ಸಿ.ಎಂ. ಎಚ್ಚರಿಕೆ
  • ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು ಹೇಳಿ: ಸಿ.ಎಂ. ಸವಾಲು

ಮಡಿಕೇರಿ : ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಿಜೆಪಿ ಸಂವಿಧಾನ ವಿರೋಧಿ. ಸಂವಿಧಾನ ಬದಲಾಯಿಸುವುದು ಬಿಜೆಪಿ ಪರಿವಾರದ ಹುನ್ನಾರ. ಕೇಂದ್ರ ಸಚಿವರಾಗಿದ್ದವರೇ ಈ ಮಾತನ್ನು ಬಹಿರಂಗವಾಗಿ ಹೇಳಿದ್ದಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಎಚ್ಚರಿಸಿದರು.

ಆರ್‌ಎಸ್‌ಎಸ್‌ ಪರಿವಾರ ಬ್ರಿಟೀಷರ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಏಕೆ ಭಾಗವಹಿಸಲಿಲ್ಲ?

ಆರ್‌ಎಸ್‌ಎಸ್‌ ಪರಿವಾರ ಬ್ರಿಟೀಷರ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಏಕೆ ಭಾಗವಹಿಸಲಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇವರು ದೇಶಭಕ್ತರಾಗಲು ಸಾಧ್ಯವೇ ಇಲ್ಲ ಎಂದರು.

ಅಂಬೇಡ್ಕರ್ ಅವರು ಸಂವಿಧಾನ ಜಾರಿ ಸಭೆಯಲ್ಲಿ ಸಂವಿಧಾನ ವಿರೋಧಿಗಳ ಬಗ್ಗೆ ಎಚ್ಚರಿಸಿದ ಮಾತುಗಳನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಸಮಾಜದಲ್ಲಿನ ಎಲ್ಲಾ ಜಾತಿ, ವರ್ಗ ಮತ್ತು ಧರ್ಮದ ಬಡವರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವುದಕ್ಕಾಗಿ ನಾವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ ಎಂದರು.

ಮೋದಿಯವರು ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು ಹೇಳಿ ಎಂದು ಸಿದ್ದರಾಮಯ್ಯ ಅವರು ಸಾರ್ವಜನಿಕರಿಗೆ ಕರೆ ಕೊಟ್ಟರು.

ಭಾರತೀಯರನ್ನು ನಂಬಿಸಿ, ಭ್ರಮೆ ಹುಟ್ಟಿಸಿ , ಭಾವನೆಗಳನ್ನು ಕೆರಳಿಸಿ ಭಯಾನಕವಾಗಿ ವಂಚಿಸುವವರಿಗೆ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದಾ? ನುಡಿದಂತೆ ನಡೆದು ರಾಜ್ಯದ ಜನರ ಬದುಕಿಗೆ ಸ್ಪಂದಿಸಿದ ನಮಗೆ ಮತ ಹಾಕಿದರೆ ಆ ಮತಕ್ಕೆ ಗೌರವ ಬರುತ್ತದಾ? ಕೊಡಗು ಜಿಲ್ಲೆಯ ಮತದಾರರು ಪ್ರಜ್ಞಾವಂತರಾಗಿದ್ದಾರೆ. ತೋಚಿಸಿ ಪ್ರಜ್ಞಾವಂತಿಕೆಯಿಂದ ಮತ ಚಲಾಯಿಸುತ್ತಾರೆ ಎನ್ನುವ ಭರವಸೆ ನನಗಿದೆ ಎಂದರು.

ಕೊಡಗಿನ ಶಾಸಕರಾದ ಪೊನ್ನಣ್ಣ ಮತ್ತು ಮಂಥರ್ ಗೌಡ ಅವರು ಕ್ಷೇತ್ರದ ಅಭಿವೃದ್ಧಿಗೆ ಏನೇನು ಕೇಳ್ತಾರೋ ಅದೆಲ್ಲವನ್ನೂ ಕೊಡಲು ಸರ್ಕಾರ ಬದ್ದವಾಗಿದೆ ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಮೆಹರೂಜ್ ಖಾನ್ ಸೇರಿ ಹಲವು ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

11 mins ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

25 mins ago

ಸುವರ್ಣಸೌಧದಲ್ಲಿ ನಾಟಿ ಕೋಳಿ ಬಗ್ಗೆ ಸ್ವಾರಸ್ಯಕರ ಚರ್ಚೆ..!

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…

33 mins ago

ಯುವನಿಧಿ | 2.84 ಲಕ್ಷ ಮಂದಿಗೆ 757 ಕೋಟಿ ರೂ.ಆರ್ಥಿಕ ನೆರವು

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…

50 mins ago

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…

1 hour ago

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

2 hours ago