Mysore
19
overcast clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ವಿದ್ಯುತ್ ತಗುಲಿ ಚೆಸ್ಕಾಂ ಸಿಬ್ಬಂದಿ ಮೃತ್ಯು

ಮಡಿಕೇರಿ : ಕೆಲಸದ ವೇಳೆ ವಿದ್ಯುತ್ ತಗುಗುಲಿ ಚೆಸ್ಕಾಂ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಮೂಲದ ಬಸವರಾಜ್ ತೆಗ್ಗಿ (27) ಮೃತಪಟ್ಟವರು. ಇಂದು ಬೆಳಗ್ಗೆ ಕುಟ್ಟಂದಿ ಗ್ರಾಮದಲ್ಲಿ ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಗೊಂಡಿದೆ. ವಿದ್ಯುತ್ ಸ್ಪರ್ಶಕ್ಕೊಳಗಾದ ಬಸವರಾಜ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಬಸವರಾಜ್ ಕಳೆದ 5 ವರ್ಷಗಳಿಂದ ವಿರಾಜಪೇಟೆ ಚೆಸ್ಕಾಂ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ