Chief Minister Medal
ಕುಶಾಲನಗರ : ಕೊಡಗು ಜಿಲ್ಲೆಯಲ್ಲಿ ಇಬ್ಬರು ಉಪವಲಯ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ದೊರೆತಿದೆ.
ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿನ್ ನಿಂಬಾಳ್ಕರ್ ಅವರಿಗೆ ಮುಖ್ಯ ಮಂತ್ರಿ ಪದಕ ಲಭಿಸಿದೆ. ಅರಣ್ಯ ಇಲಾಖೆಯಲ್ಲಿ ೨೦೦ಕ್ಕೂ ಹೆಚ್ಚು ಅರಣ್ಯ ಮೊಕದ್ದಮೆಗಳು, ೩೦ ಕ್ಕೂ ಹೆಚ್ಚು ವನ್ಯಜೀವಿ ಪ್ರಕರಣಗಳು ಹಾಗೂ ೫೦ಕ್ಕೂ ಹೆಚ್ಚು ಉಚ್ಚ ನ್ಯಾಯಾಲಯದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಿ ಅರಣ್ಯ ಕಾನೂನು ಬಗ್ಗೆ ತರಬೇತಿ ಶಾಲೆಯಲ್ಲಿ ಭೋಧನೆಯನ್ನು ಮಾಡಿರುತ್ತಾರೆ.
ಇವರು ಮೂಲತಃ ಬೆಳಗಾವಿ ಜಿಲ್ಲೆ, ಅಥಣಿಯವರಾಗಿದ್ದು ಕಳೆದ ೮ ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಕಳೆದ ಕೆಲವು ವರ್ಷಗಳ ಕಾಲ ವಿರಾಜಪೇಟೆ ಉಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಕುಶಾಲನಗರದ ಮೀನುಕೊಲ್ಲಿ ವಲಯದಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕುಶಾಲನಗರ ಗಂಧದಕೋಟಿಯಲ್ಲಿರುವ ಅರಣ್ಯ ತರಬೇತಿ ಕೇಂದ್ರದ ಉಪ ವಲಯ ಅರಣ್ಯಾಧಿಕಾರಿ ಐಶ್ವರ್ಯ ಆರ್. ಗೌಡರ್ ಕೂಡ ಮುಖ್ಯ ಮಂತ್ರಿ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರು ಇಲಾಖೆಯಲ್ಲಿ ಮಾಡಿರುವ ಸಕ್ರಿಯ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
೧೨೦ ಉಪ ವಲಯ ಅರಣ್ಯಾಧಿಕಾರಿ ಹಾಗೂ ೪೫ ಅರಣ್ಯ ವೀಕ್ಷಕರಿಗೆ ವೃತ್ತಿ ಬುನಾದಿ ತರಬೇತಿಯಲ್ಲಿ ವನ್ಯಜೀವಿ ನಿರ್ವಹಣೆ, ಸಸ್ಯಶಾಸ್ತ್ರ, ಮಣ್ಣು ಶಾಸ್ತ್ರ, ಲೆಕ್ಕ ಪತ್ರ ನಿರ್ವಹಣೆ ಮೊದಲಾದ ವಿಷಯಗಳ ಕುರಿತು ಬೋಧನೆ ಮಾಡಿರುವುದು. ೧೦೦ ಕ್ಕೂ ಹೆಚ್ಚು ಬಗೆಯ ಸಸ್ಯ ಪ್ರಬೇಧ ಗುರುತಿಸುವ ಜ್ಞಾನ ಹೊಂದಿರುವುದು, ಪಕ್ಷಿ ಹಾಗೂ ಜೀವಿ ಸಂಕುಲದ ಬಗ್ಗೆ ಹೊಂದಿರುವ ಜ್ಞಾನವನ್ನು ಇಲಾಖೆ ಗುರುತಿಸಿ ಗೌರವಿಸುತ್ತಿದೆ.
ಮಾನವ ವನ್ಯ ಜೀವಿ ಸಂಘರ್ಷ, ಜೇನುಕೃಷಿ, ವನ್ಯಜೀವಿ ಕಾನೂನು, ಇಕ್ಟ್ ವಿಷಯದ ಬಗ್ಗೆ ತರಬೇತಿ, ಚಿಣ್ಣರ ವನ ದರ್ಶನ ಕಾರ್ಯಕ್ರಮ ಪೊನ್ನಂಪೇಟೆ ವಲಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಾಲಾ ಕಾಲೇಜುಗಳ ಮಕ್ಕಳಿಗೆ ಮಾಡಿರುವ ಬೋಧನೆಯ ಸುಧೀರ್ಘ ಸೇವೆಗೆ ಐಶ್ವರ್ಯ ಗೌಡರ್ ಅವರಿಗೆ ಪ್ರಶಸ್ತಿ ಲಭಿಸಿದೆ.
ಮೂಲತಃ ಬಾಗಲಕೋಟ ಜಿಲ್ಲೆಯ ಇಳಕಲ್ ವಾಸಿಯಾಗಿರುವ ಇವರು, ಕಳೆದ ೮ ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರ ಸಾಧನೆಗೆ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರ : ಜಿಲ್ಲೆಯ ಶ್ರೀಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಹಳ್ಳಿಗಳಲ್ಲಿನ ಮೂಲಭೂತ ಸೌಕರ್ಯವನ್ನು ದೇವಾಲಯಕ್ಕೆ ಬರುವ ಆದಾಯದಲ್ಲಿ ಅಭಿವೃದ್ಧಿಪಡಿಸಬೇಕು ಎಂದು…
ಸುವರ್ಣಸೌಧ : ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ…
ಬೆಳಗಾವಿ : ಕಾವೇರಿ, ಕಬಿನಿ, ಅರ್ಕಾವತಿ, ತುಂಗಭದ್ರಾ, ಭದ್ರಾ ಸೇರಿದಂತೆ ವಿವಿಧ ನದಿಗಳಿಗೆ ಸಂಸ್ಕರಿಸದ ಗೃಹ ತ್ಯಾಜ್ಯ ಜಲ ಹರಿಯುತ್ತಿದ್ದು,…
ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ…
ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ…
ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು…