Mysore
29
scattered clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಚಿಕ್ಕಮಗಳೂರು: ಅಗ್ನಿ ಅವಘಢ ತಡೆಗಟ್ಟಲು ಡ್ರೋನ್‌ ಕ್ಯಾಮೆರಾ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುಡು ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕಾಡ್ತಿಚ್ಚು, ಆಕಸ್ಮಿಕ ಅಗ್ನಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದೇವರಮನೆ ಸೇರಿದಂತೆ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿಯಿಂದಾಗಿ ಅಪಾರ ಪ್ರಮಾಣದ ಸಸ್ಯ ಸಂಪತ್ತು ಹಾಗೂ ಜೀವ ಸಂಕುಲ ನಾಶಗೊಂಡಿದೆ.

ಮೇಲಿಂದ ಮೇಲೆ ಅಗ್ನಿಯ ಅವಘಡಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಇದೀಗ ಡ್ರೋನ್ ಮೊರೆ ಹೋಗಿದೆ. ಹೌದು ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರವಾಸಿಗರು ಹಾಗೂ ಸ್ಥಳೀಯರ ಮೇಲೆ ಡೋನ್ ಕ್ಯಾಮೆರಾ ಹದ್ದಿನ ಕಣ್ಣಿಟ್ಟಿದೆ.

ಬೆಂಕಿ ಹಾಕುತ್ತಿರುವವರು ಸ್ಥಳೀಯರು ಅಥವಾ ಪ್ರವಾಸಿಗರಿಂದ ಬೆಂಕಿ ಕಾಣಿಸಿಕೊಳ್ಳುತ್ತಿದೆಯೋ ಅಥವಾ ಆಕಸ್ಮಿಕ ಬೆಂಕಿ ಅನ್ನೋದನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ಮುಂದಾಗಿದೆ. ಗುಡ್ಡಗಾಡು ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡರೆ ನಂದಿಸುವುದು ಬಹಳ ಕಷ್ಟದ ಕೆಲಸ ಹೀಗಾಗಿ, ಕಾಡಿನ ರಕ್ಷಣೆಗೆ ಅರಣ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಿದೆ.

Tags:
error: Content is protected !!