ಕೊಡಗು

ಇಂದು ಸ್ವಚ್ಛ ಕೊಡಗು-ಸುಂದರ ಕೊಡಗು ಅಭಿಯಾನ

೨೨೦ಕೂ ಅಧಿಕ ಸಂಘ ಸಂಸ್ಥೆಗಳು ಭಾಗಿ; ಜಿಲ್ಲೆಯಾದ್ಯಂತ ಸ್ವಚ್ಛತಾ ಅಭಿಯಾನ 

ಮಡಿಕೇರಿ: ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್‌ನಿಂದ ಹಲವಾರು ಸಂಘಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಕೊಡಗು ಜಿಲ್ಲೆಯಾದ್ಯಂತ ಸ್ವಚ್ಛ ಕೊಡಗು- ಸುಂದರ ಕೊಡಗು ತ್ಯಾಜ್ಯ ವಿಲೇವಾರಿ ಅಭಿಯಾನ ಆಯೋಜಿಸಲಾಗಿದ್ದು, ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ ಸ್ಪಂದನೆ ದೊರಕಿದೆ.

ಅ.೧೫ರಂದು ಬುಧವಾರ ಬೆಳಿಗ್ಗೆ ೮ ಗಂಟೆಯಿಂದ ಕೊಡಗಿನಾದ್ಯಂತ ರಸ್ತೆ ಬದಿಗಳಲ್ಲಿನ ಕಸ, ತ್ಯಾಜ್ಯಗಳನ್ನು ವಿಲೇವಾರಿ ಮಾಡುವ ಮೂಲಕ ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ ಹೊಣೆಯರಿತ ಪ್ರವಾ ಸೋದ್ಯಮಕ್ಕೆ ಪೂರಕವಾಗಿ ಸ್ಪಂದಿಸಲಿದೆ. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ ಇಲಾಖೆ, ಕೊಡಗು ಹೋಂ ಸ್ಟೇ ಅಸೋಸಿಯೇಷನ್, ಕೊಡಗು ಚೇಂಬರ್ ಆಫ್ ಕಾಮರ್ಸ್, ಕೊಡಗು ಟ್ರಾವಲ್ ಅಸೋಸಿಯೇಷನ್, ರೋಟರಿ, ಲಯನ್ಸ್, ರೆಡ್ ಕ್ರಾಸ್, ಗ್ರೀನ್ ಸಿಟಿ ಫೋರಂ, ಖಾಸಗಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಹಲವಾರು ಸಂಘಸಂಸ್ಥೆಗಳು ಈ ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿವೆ.

ಕೊಡಗಿನಾದ್ಯಂತ ಮುಖ್ಯ ರಸ್ತೆಗಳ ಇಕ್ಕೆಲಗಳೂ ಸೇರಿದಂತೆ ಇತರ ರಸ್ತೆಗಳ ಬದಿಗಳಲ್ಲಿರುವ ತ್ಯಾಜ್ಯಗಳನ್ನು ಆ ವ್ಯಾಪ್ತಿಯಲ್ಲಿರುವ ರೆಸಾರ್ಟ್, ಹೋಟೆಲ್, ರೆಸ್ಟೋರೆಂಟ್, ವರ್ತಕರು, ಸಂಘ ಸಂಸ್ಥೆಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳ ಸಹಕಾರದಲ್ಲಿ ವಿಲೇವಾರಿ ಮಾಡಿ ಸ್ವಚ್ಛತೆಯ ಸಂದೇಶವನ್ನು ಸಾರಲಾಗುತ್ತದೆ. ಇದೇ ಮೊದಲ ಬಾರಿಗೆ ಕೊಡಗಿನಲ್ಲಿ ಇಂತಹ ಬೃಹತ್ ಮಟ್ಟದ ಸ್ವಚ್ಛತಾ ಅಭಿಯಾನ ಏಕದಿನ, ಏಕಕಾಲದಲ್ಲಿ ಆಯೋಜಿಸಲ್ಪಟ್ಟಿದೆ.

ಜಿಲ್ಲೆಯಾದ್ಯಂತದಿಂದ ಅಭಿಯಾನಕ್ಕೆ ಸಹಕಾರ ನೀಡುವುದಾಗಿ ನಿರೀಕ್ಷೆಗೂ ಮೀರಿದ ಸ್ಪಂದನೆ ಸಂಘಟನೆಗಳ ಪ್ರಮುಖರಿಂದ ದೊರಕಿದೆ. ಬುಧವಾರ ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲಾ ಕೇಂದ್ರವಾದ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಬಳಿ ಬೆಳಿಗ್ಗೆ ೮ ಗಂಟೆಗೆ ಶಾಸಕ ಡಾ.ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟ ರಾಜಾ, ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಚಾಲನೆ ನೀಡಲಿದ್ದಾರೆ.

ಗೋಣಿಕೊಪ್ಪಲಿನಲ್ಲಿ ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಕುಶಾಲ ನಗರದಲ್ಲಿ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ವಿರಾಜಪೇಟೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ, ಸೋಮವಾರಪೇಟೆಯಲ್ಲಿ ತಾಲ್ಲೂಕು ಹೋಂ ಸ್ಟೇ ಅಸೋಸಿಯೇಷನ್ ಅಧ್ಯಕ್ಷ ರೋಹಿತ್ ಮತ್ತು ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ ಉಪಾಧ್ಯಕ್ಷ ಬಿ.ಎಸ್.ಸುಂದರ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಆಯಾ ತಾಲ್ಲೂಕು ಕೇಂದ್ರಗಳು, ಸ್ಥಳೀಯ ಸಂಸ್ಥೆಗಳು, ಗ್ರಾಪಂಗಳಲ್ಲಿ ಸ್ಥಳೀಯ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪ್ರಮುಖರು ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಇದನ್ನು ಓದಿ: ನಾಳೆ ತರಕಾರಿ ಮಾರುಕಟ್ಟೆ ಲೋಕಾರ್ಪಣೆ

ಕೊಡಗು ವಿವಿಗೆ ಸೇರಿದ ೨೩ ಕಾಲೇಜುಗಳ ೧,೫೦೦ ಎನ್‌ಎಸ್‌ಎಸ್ ವಿದ್ಯಾರ್ಥಿಗಳೂ ತಮ್ಮ ಕಾಲೇಜು ವ್ಯಾಪ್ತಿಯ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಿದ್ದಾರೆ

ತ್ಯಾಜ್ಯ ವಿಲೇವಾರಿಗೂ ಕ್ರಮ:  ಬುಧವಾರದಂದು ಸಂಗ್ರಹವಾದ ತ್ಯಾಜ್ಯ ವನ್ನು ಆಯಾ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳ ಅಧಿಕಾರಿ, ಸಿಬ್ಬಂದಿಗಳ ಸಹಕಾರದೊಂದಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಸಂಗ್ರಹಿಸಿ, ಶಾಸಕ ಎ.ಎಸ್. ಪೊನ್ನಣ್ಣ ಸೂಚನೆಯಂತೆ ಮೈಸೂರಿನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಲಾಗುತ್ತದೆ. ಆ ಮೂಲಕ ಸಂಗ್ರಹವಾಗುವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲೂ ಕ್ರಮ ಕೈಗೊಳ್ಳಲಾಗಿದೆ.

” ಕೊಡಗಿನ ಸ್ವಚ್ಛತೆಯು ಪ್ರತಿಯೊಬ್ಬರಿಗೂ ಸಂಬಂಧಿಸಿದ್ದಾಗಿದೆ. ಈ ನಿಟ್ಟಿನಲ್ಲಿ ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ ಸ್ವಚ್ಛ ಕೊಡಗು – ಸುಂದರ ಕೊಡಗು ಅಭಿಯಾನ ಹಮ್ಮಿಕೊಂಡು ಸ್ವಚ್ಛತೆಗೆ ಸಂಬಂಧಿತ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದೆ.”

-ನಸೀರ್ ಅಹಮ್ಮದ್, ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ.

” ಸ್ವಚ್ಛ ಕೊಡಗು – ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ ಸ್ಪಂದನೆ ದೊರಕಿದ್ದು, ಬುಧವಾರ ಬೆಳಿಗ್ಗೆ ೮ ಗಂಟೆಯಿಂದ ೧೧ ಗಂಟೆಯವರೆಗೆ ಸ್ವಚ್ಛತೆಗೆ ಸಂಬಂಧಿತ ಬೃಹತ್ ಅಭಿಯಾನ ನಡೆಯಲಿದೆ. ಜಿಲ್ಲೆಯಾದ್ಯಂತ ನಿರೀಕ್ಷೆಗೂ ಮೀರಿದ ಸ್ಪಂದನೆ ಸಂಘಟನೆಗಳ ಪ್ರಮುಖರಿಂದ ದೊರಕಿದೆ. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಈ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು.”

-ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ, ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

1 hour ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

1 hour ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

1 hour ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

1 hour ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

1 hour ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

1 hour ago