ಬೆಂಗಳೂರು: ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಗೃಹ ಕಚೇರಿ ಕೃಷ್ಣದಲ್ಲಿ “ಚೆನ್ನಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅಂತರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.
ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ ಎಂದರು.
2026ರ ಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದು ಭರವಸೆ ನೀಡಿದರು.
ಶಾಸಕರೂ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಮತ್ತು ಸಚಿವರಾದ ಬೋಸರಾಜು, ಭೈರತಿ ಸುರೇಶ್ ಮತ್ತು ಶಿವರಾಜ್ ತಂಗಡಗಿ ಸೇರಿದಂತೆ ಕೊಡವ ಸಮುದಾಯದ ಎಲ್ಲಾ ಮುಖಂಡರು ಉಪಸ್ಥಿತರಿದ್ದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…