ಕೊಡಗು

ಕೊಡಗು: 20 ಕುಟುಂಬಗಳ ಸಂಕಷ್ಟ ಕೇಳಿ ಪರಿಹಾರ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.

ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು, ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ ನಿರ್ಮಾಣದ ಜೊತೆಗೆ ಇತರೆ ದುರಸ್ತಿ ಕಾರ್ಯಗಳನ್ನು ಮುಗಿಸುವಂತೆ ಸೂಚಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸ್ ರಾಜು, ಶಾಸಕರಾದ ಪೊನ್ನಣ್ಣ , ಮಂಥರ್ ಗೌಡ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

8 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

9 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

9 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

9 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

10 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

10 hours ago