ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.
ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು, ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ ನಿರ್ಮಾಣದ ಜೊತೆಗೆ ಇತರೆ ದುರಸ್ತಿ ಕಾರ್ಯಗಳನ್ನು ಮುಗಿಸುವಂತೆ ಸೂಚಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸ್ ರಾಜು, ಶಾಸಕರಾದ ಪೊನ್ನಣ್ಣ , ಮಂಥರ್ ಗೌಡ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…