ಕೊಡಗು

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಲೈನ್‌ಮನೆಗಳಲ್ಲಿ ವಾಸ ಮಾಡುತ್ತಿರುವ ಪರಿಶಿಷ್ಟ ಪಂಗಡದವರಿಗೆ ನಿವೇಶನ ಹಕ್ಕುಪತ್ರ ವಿತರಿಸುವುದರ ಜೊತೆಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಭೂಮಿ ಪೂಜೆ ನೆರವೇರಿಸುವ ಸಾಧ್ಯತೆ ಇದೆ. ಆದ್ದರಿಂದ ವಿವಿಧ ಇಲಾಖೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಲೈನ್‌ಮನೆಗಳಲ್ಲಿ ವಾಸಿಸುವ ನಿವೇಶನ ರಹಿತ ಕುಟುಂಬದವರ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಆದರೂ ಸಹ ಕೆಲವು ಕುಟುಂಬದವರ ಸಮರ್ಪಕ ಮಾಹಿತಿ ಲಭ್ಯ ಇಲ್ಲದಿರುವ ಹಿನ್ನೆಲೆ ಸಂಬಂಧಪಟ್ಟ ಗ್ರಾಮಕ್ಕೆ ತೆರಳಿ ಆಧಾರ್ ಕಾರ್ಡ್ ಮಾಡಿಸುವುದು ಹಾಗೆಯೇ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ನಿರ್ದೇಶನ ನೀಡಿದರು.

ಆಂದೋಲನ ಡೆಸ್ಕ್

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

5 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

6 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

6 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

6 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

6 hours ago

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಘಟಿಕೋತ್ಸವ: ರಾಜ್ಯಪಾಲರಿಂದ ಸಾಲೂರು ಮಠದ ಸ್ವಾಮೀಜಿಗೆ ಪಿಎಚ್‌ಡಿ ಪ್ರದಾನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಬೆಂಗಳೂರು: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ…

6 hours ago