ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಲೈನ್‌ಮನೆಗಳಲ್ಲಿ ವಾಸ ಮಾಡುತ್ತಿರುವ ಪರಿಶಿಷ್ಟ ಪಂಗಡದವರಿಗೆ ನಿವೇಶನ ಹಕ್ಕುಪತ್ರ ವಿತರಿಸುವುದರ ಜೊತೆಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಭೂಮಿ ಪೂಜೆ ನೆರವೇರಿಸುವ ಸಾಧ್ಯತೆ ಇದೆ. ಆದ್ದರಿಂದ ವಿವಿಧ ಇಲಾಖೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಲೈನ್‌ಮನೆಗಳಲ್ಲಿ ವಾಸಿಸುವ ನಿವೇಶನ ರಹಿತ ಕುಟುಂಬದವರ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಆದರೂ ಸಹ ಕೆಲವು ಕುಟುಂಬದವರ ಸಮರ್ಪಕ ಮಾಹಿತಿ ಲಭ್ಯ ಇಲ್ಲದಿರುವ ಹಿನ್ನೆಲೆ ಸಂಬಂಧಪಟ್ಟ ಗ್ರಾಮಕ್ಕೆ ತೆರಳಿ ಆಧಾರ್ ಕಾರ್ಡ್ ಮಾಡಿಸುವುದು ಹಾಗೆಯೇ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ನಿರ್ದೇಶನ ನೀಡಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…