Mysore
25
broken clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

ಕೊಡಗು ಮಳೆ: ಸ್ಥಳದಲ್ಲೇ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಪರಿಹಾರ ಸೂಚಿಸಿದ ಸಿಎಂ

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಬಳಿಯ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸ್ ರಾಜು, ಶಾಸಕರಾದ ಪೊನ್ನಣ್ಣ , ಮಂತರ್ ಗೌಡ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ಥಳೀಯರ ಜೊತೆ ಕೆಲಹೊತ್ತು ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ 20 ಕುಟುಂಬಗಳ ಸಂಕಷ್ಟ ಕೇಳಿ ಸ್ಥಳದಲ್ಲೇ ಪರಿಹಾರ ಸೂಚಿಸಿದರು.

Tags:
error: Content is protected !!