Mysore
22
clear sky

Social Media

ಭಾನುವಾರ, 15 ಮಾರ್ಚ್ 2026
Light
Dark

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು ತಂಪೆರೆದಿದೆ.

ಕೊಡಗು, ಚಿಕ್ಕಮಗಳೂರು ಸೇರಿ ಬೆಳಗಾವಿಯಲ್ಲಿಯೂ ಉತ್ತಮ ಮಳೆಯಾಗಿದ್ದು, ಏಕಾಏಕಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿರುವ ಪ್ರಸಂಗವೂ ನಡೆದಿದೆ.

ಕೊಡಗಿನಲ್ಲಿ ಸಂಜೆ ವೇಳೆಗೆ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿತ್ತು. ಆದರೂ ಜನ ಖುಷಿಯಿಂದಲೆ ಮಳೆಯೊಂದಿಗೆ ಹೆಚ್ಚೆ ಹಾಕಿ ಮನೆ ಸೇರಿದರು. ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರಿ ಗಾಳಿಯೊಂದಿಗೆ ಉತ್ತಮ ಮಳೆಯಾಗಿದ್ದು, ಕೆಲ ಪ್ರದೇಶಗಳಲ್ಲಿ ಆಲಿಕಲ್ಲು ಮಳೆ ಕೂಡ ಸುರಿದಿದೆ. ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ಮತ್ತು ಕಡಬಗೆರೆ ಭಾಗದಲ್ಲಿ ಭಾರೀ ಮಳೆಯಾಗಿದ್ದರೆ, ಮೂಡಿಗೆರೆಯಲ್ಲಿ ಆಲಿಕಲ್ಲು ಮಳೆಯಾಗಿದೆ. ಬೆಳಗಾವಿಯಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮಳೆಯಾಗಿದೆ.

ಹೀಗಿದೆ ನಾಳಿನ ಹವಾಮಾನ..
ರಾಜ್ಯದ 4-5 ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಳೆಯೂ ಗಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ಕೊಡಗು, ಬಳ್ಳಾರಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಯನ್ನು ಅಂದಾಜಿಸಲಾಗಿದೆ.

 

Tags:
error: Content is protected !!