ಕುಶಾಲನಗರ : ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಚಾಲಕ ಮೃತಪಟ್ಟಿರುವ ಘಟನೆ ಪಟ್ಟಣ ಸಮೀಪ ಶಿರಂಗಾಲ ಶ್ರೀ ಮಂಟಿಗಮ್ಮ ದೇವಾಲಯ ಪ್ರವೇಶದ್ವಾರದ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಪಿರಿಯಾಪಟ್ಟಣ ತಾಲ್ಲೂಕಿನ ಕಣಗಾಲು ಹೋಬಳಿಯ ಚಾಮರಾಯನಕೋಟೆ ಗ್ರಾಮದ ನಿವಾಸಿ ಅಶೋಕ್(36) ಮೃತಪಟ್ಟವರು.
ಕೊಣನೂರು ಕಡೆಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಶಿರಂಗಾಲದಿಂದ ಕೊಣನೂರು ಕಡೆಗೆ ಹೋಗುತ್ತಿದ್ದ ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಅಶೋಕ್ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ಚಂದ್ರಶೇಖರ್, ವೃತ್ತ ನಿರೀಕ್ಷಕ ದಿನೇಶ್, ಸಂಚಾರ ಠಾಣಾಧಿಕಾರಿ ಶ್ರೀನಿವಾಸ್, ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ, ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತ ಅಶೋಕ್ ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.





