ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಗೆ ವರ್ಣರಂಜಿತ ತೆರೆಬಿದ್ದಿದೆ. ಹಗಲು ಮೈಸೂರು ದಸರಾದ ವೈಭವ ನೋಡು, ರಾತ್ರಿ ಮಂಜಿನ ನಗರಿ ಮಡಿಕೇರಿ ದಸರಾದ ಸೊಬಗು ನೋಡು ಎಂಬ ಮಾತಿನಂತೆ ಸಹಸ್ರಾರು ಮಂದಿ ಮಡಿಕೇರಿ ದಸರಾ ಸೊಬಗನ್ನು ಬುಧವಾರ ರಾತ್ರಿ ಕಣ್ತುಂಬಿಕೊಂಡರು.
ರಾತ್ರಿಯಿಡೀ ನಡೆದ ಮೈನವಿರೇಳಿಸುವ ಮಂಟಪಗಳ ಶೋಭಾಯಾತ್ರೆ ಜನರ ಮನಸೂರೆಗೊಂಡಿತು. ಧ್ವನಿ ಬೆಳಕಿನ ಸಂಯೋಜನೆಯೊಂದಿಗೆ ನಡೆದ ಅಬ್ಬರದ ಸ್ತಬ್ಧ ಚಿತ್ರ ಪ್ರದರ್ಶನ ಜನರನ್ನು ದೇವಲೋಕಕ್ಕೆ ಕರೆದೊಯ್ಯಿತು. ದುಷ್ಟ ಸಂಹಾರದ ಸಂಕೇತ ನವರಾತ್ರಿಯ ಅಂಗವಾಗಿ ನಡೆದ ಮಂಟಪ ಪ್ರದರ್ಶನ ದೇವಾನುದೇವತೆಗಳ ಪವಾಡಕ್ಕೆ ಸಾಕ್ಷಿಯಾದರೆ, ಸಹಸ್ರಾರು ಭಕ್ತರು ಭಾವಪರವಶತೆಯಲ್ಲಿ ಮಿಂದೆದ್ದರು.
ಮಂಜಿನ ನಗರಿ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾದ ಮಂಟಪ ಶೋಭಾಯಾತ್ರೆ ಮೈನವಿರೇಳಿಸುವಂತಿತ್ತು. ದೇವಾನು ದೇವತೆಗಳ ಲೀಲೆಗಳನ್ನು ಬಿಂಬಿಸುವ ಕಥಾ ಪ್ರಸಂಗಗಳ ಸಂಯೋಜನೆ ಎಲ್ಲರ ಗಮನಸೆಳೆಯಿತು. ಎದೆನಡುಗಿಸುವ ಶಬ್ಧ, ಅದಕ್ಕೆ ತಕ್ಕಂತೆ ಬೆಳಕು. ಇವೆಲ್ಲವುಗಳಿಗೆ ಪೂರಕವಾಗಿ ನರ್ತಿಸುವ ಕಲಾಕೃತಿಗಳು ನೆರೆದಿದ್ದ ಜನರನ್ನು ಒಮ್ಮೆ ದೇವಲೋಕಕ್ಕೆ ಸಂಚಾರ ಮಾಡಿಸಿದಂತಿತ್ತು.
ರಾತ್ರಿ ೧೦ ಗಂಟೆಗೆ ಆರಂಭವಾದ ದಶಮಂಟಪಗಳ ಉತ್ಸವ ಬೆಳಗ್ಗೆ ೫ ಗಂಟೆಯವರೆಗೂ ನಡೆಯಿತು. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಹಸ್ರಾರು ಪ್ರವಾಸಿಗರು ಮೆರವಣಿಗೆ ನೋಡಲು ಮುಗಿಬಿದ್ದಿದ್ದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ರಾತ್ರಿಯಿಡೀ ಮಂಜಿನ ನಗರಿಯ ಪ್ರಮುಖ ರಸ್ತೆಗಳಲ್ಲಿ ಜನಪ್ರವಾಹವೇ ಹರಿಯುತ್ತಿತ್ತು. ದೇವಾನುದೇವತೆಗಳ ಶಕ್ತಿ ಲೀಲೆಗಳನ್ನು ಕಣ್ತುಂಬಿಕೊಂಡ ಜನತೆ ಖುಷಿಯ ಅಲೆಯಲ್ಲಿ ತೇಲಿದರು.
ದಸರಾ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿತ್ತು. ಅಲ್ಲಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಕೆ. ರಾಮರಾಜನ್ ಮತ್ತು ಹೆಚ್ಚು ವರಿ ಪೊಲೀಸ್ ವರಿಷ್ಠಾಕಾರಿ ಸುಂದರ್ ರಾಜ್ ಮಾರ್ಗದರ್ಶನದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಒಟ್ಟಿನಲ್ಲಿ ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಈ ಬಾರಿಯೂ ಲಕ್ಷಾಂತರ ಮಂದಿಯನ್ನಾಕರ್ಷಿಸುವಲ್ಲಿ ಯಶಸ್ವಿಯಾಗಿದೆ. ದಸರೆಗೆ ೨ ದಿನಗಳ ಮುನ್ನವೇ ಸಾಗರೋಪಾದಿಯಲ್ಲಿ ಮಡಿಕೇರಿಗೆ ಆಗಮಿಸಿದ ಪ್ರವಾಸಿಗರು ಸ್ಥಳೀಯರೊಡಗೂಡಿ ಜನೋತ್ಸವದ ವೈಭವವನ್ನು ಕಣ್ತುಂಬಿಕೊಂಡರು.
ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…
ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…
ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…
ನವದೆಹಲಿ: ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…
ಬೆಂಗಳೂರು: ಸಚಿವ ಜಮೀರ್ ಅಹಮ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು…