Categories: ಕೊಡಗು

ಮಳೆಹಾನಿ ಕಾಮಗಾರಿ 3 ತಿಂಗಳೊಳಗೆ ಪೂರ್ಣಗೊಳಿಸಿ: ವೆಂಕಟ್ ರಾಜಾ

ಮಡಿಕೇರಿ : ಪ್ರಸಕ್ತ ಮುಂಗಾರು ಅವಧಿಯಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆ ಹಾಗೂ ಸರ್ಕಾರಿ ಕಟ್ಟಡಗಳು ಹಾನಿಯಾಗಿದ್ದು, ಈ ಸಂಬಂಧ ಕಾಮಗಾರಿ ಕೈಗೊಳ್ಳಲು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ ಶೇ.75 ರಷ್ಟು ಹಣ ಬಿಡುಗಡೆ ಮಾಡಲಾಗಿದೆ. ಹೀಗಾಗಿ, 90 ದಿನದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ  ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯನ್ನು ವಿಡಿಯೋ ಸಂವಾದದ ಮೂಲಕ ಸೋಮವಾರ ನಡೆಸಿ ಜಿಲ್ಲಾಧಿಕಾರಿ ಅವರು ಮಾತನಾಡಿದರು.

ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಸಲ್ಲಿಸಲಾಗಿದ್ದ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆದಿತ್ತು, ಹಣ ಬಿಡುಗಡೆ ಮಾಡಲಾಗಿದೆ. ಕೂಡಲೇ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಮುಖ್ಯಮಂತ್ರಿಗಳು ಆಗಸ್ಟ್, 02 ರಂದು ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಬಳಿ ರಸ್ತೆ ಕುಸಿದಿದ್ದ ಪ್ರದೇಶಕ್ಕೆ ಭೇಟಿ ಹಾಗೂ ವಿರಾಜಪೇಟೆ ತಾಲ್ಲೂಕಿನ ಕೆದಮಳ್ಳೂರು ಗ್ರಾಮದ ಬಳಿ ರಸ್ತೆ ಕುಸಿದು ಹಾನಿ ಆಗಿದ್ದ ಪ್ರದೇಶಕ್ಕೆ ಭೇಟಿ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದ್ದು, ಈ ಸಂಬಂಧ ಕಾಮಗಾರಿಗಳನ್ನು ಆದ್ಯತೆ ಮೇಲೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ತಹಶೀಲ್ದಾರರು ಕಾಮಗಾರಿಯನ್ನು ಕಾಲ ಕಾಲಕ್ಕೆ ವೀಕ್ಷಿಸಿ ವರದಿ ನೀಡುವಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿನಿರ್ದೇಶನ ನೀಡಿದರು.

ಮೂರನೇ ಪಾರ್ಟಿಯಿಂದಲೂ ಸಹ ಕಾಮಗಾರಿ ಸಂಬಂಧ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಮನೆ ಹಾನಿ ಸಂಬಂಧಿಸಿದಂತೆ ಕಂದಾಯ ಸಚಿವರ ಆದೇಶದಂತೆ ಕಾಮಗಾರಿ ಕೈಗೊಳ್ಳಬೇಕು. ಪ್ಯಾಕೇಜ್ ವರ್ಕ್ ಸೇರಿದಂತೆ ಎಲ್ಲಾ ಕೆಲಸಗಳನ್ನು ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಹೇಳಿದರು.

ಇದೇ 30 ರಂದು  ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಕೆಡಿಪಿ ಸಭೆಗೆ ಅಧಿಕಾರಿಗಳು ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ  ಹೇಳಿದರು.

ಪಂಚಾಯತ್ ರಾಜ್ ಎಂಜಿನಿಯರ್ ನಾಯಕ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಮುತ್ತುರಾಜ್ ಅವರು ಹಲವು ಮಾಹಿತಿ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ವಿಡಿಯೋ ಸಂವಾದಲ್ಲಿ ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

3 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

6 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

6 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

6 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

6 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

6 hours ago