ಮಡಿಕೇರಿ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗಿನ ಶಾಸಕದ್ವಯರ ಹೆಸರನ್ನು ತಳಕು ಹಾಕುತ್ತಿರುವ ಬಿಜೆಪಿಗರ ವಿರುದ್ಧ ಇಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು.
ಜನರಲ್ ತಿಮ್ಮಯ್ಯ ಸರ್ಕಲ್‌ನಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಗಾಂಧಿ ಮಂಟಪದಿಂದ ಜಿ.ಟಿ.ಸರ್ಕಲ್‌ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ಬಿಜೆಪಿ ನಾಯಕರ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಸಭೆ ಸೇರಿ ಶಾಸಕ ಪೊನ್ನಣ್ಣ ಹಾಗೂ ಮಂತರ್ ಗೌಡರಿಗೆ ಬೆಂಬಲ ನೀಡಿ, ಯಾವುದೇ ಕಾರಣಕ್ಕೂ ನೀವು ಹೆದರಬೇಡಿ. ನಿಮ್ಮ ಪರ ನಾವಿದ್ದೇನೆ ಎಂದು ಬಹಿರಂಗವಾಗಿಯೇ ಧೈರ್ಯ ಹೇಳಿದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅವರು, ವಿನಯ್ ಸೋಮಯ್ಯ ಆತ್ಮಹತ್ಯೆಗೂ ನಮ್ಮ ಶಾಸಕರಿಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿಯವರು ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಇದು ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಜನರೇ ಬಿಜೆಪಿಗೆ ತಕ್ಕಪಾಠ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…
ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…
ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…