Mysore
21
mist

Social Media

ಬುಧವಾರ, 17 ಡಿಸೆಂಬರ್ 2025
Light
Dark

ಮುಂದುವರಿದ ಕಾಡಾನೆ ದಾಳಿ: ಕಾರ್ಮಿಕರ ಮಹಿಳೆಯರಿಬ್ಬರಿಗೆ ಗಾಯ

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ ಮುಂದುವರೆದಿದ್ದು, ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯರಿಬ್ಬರು ಗಾಯಗೊಂಡ ಘಟನೆ ಸಿದ್ದಾಪುರದಲ್ಲಿ ನಡೆದಿದೆ.

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ತೂಬನಕೊಲ್ಲಿ ಕಾಫಿ ತೋಟದಲ್ಲಿ ಘಟನೆ ನಡೆದಿದ್ದು, ಕಾರ್ಮಿಕರಾದ ಲಲಿತಾ ಹಾಗೂ ಸರಿತಾ ಗಾಯಗೊಂಡಿದ್ದಾರೆ. ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ಹಠಾತ್ತಾನೆ ದಾಳಿ ನಡೆಸಿದೆ. ಕೂಡಲೇ ಗಾಯಗೊಂಡ ಮಹಿಳೆಯರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿದ್ದಾಪುರ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕಾಫಿ ತೋಟದೊಳಗೆಯೇ ಕಾಡಾನೆ ಹಿಂಡು ಬೀಡುಬಿಟ್ಟಿದೆ. ಅರಣ್ಯ ಇಲಾಖೆ ಕಾಡಾನೆಗಳನ್ನು ಕಾಡಿಗಟ್ಟಿದರೂ ಮತ್ತೆ ಕಾಫಿ ತೋಟಗಳನ್ನೇ ಆಶ್ರಯತಾಣವನ್ನಾಗಿ ಮಾಡಿಕೊಳ್ಳುತ್ತಿದೆ. ಕಾಡಾನೆ ಹಾವಳಿಯಿಂದ ಕಾರ್ಮಿಕರು ಕೆಲಸಕ್ಕೆ ಹೋಗಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!