Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಕೊಡಗಿನಲ್ಲಿ ಮುಂದುವರೆದ ಮಳೆಯ ಅಬ್ಬರ : ಹಲವು ಮನೆಗಳು ಜಲಾವೃತ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕಳೆದೆರೆಡು ದಿನಗಳಿಂದ ವರುಣ ಆರ್ಭಟಿಸಿದ ಹಿನ್ನೆಲೆ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಪರಿಣಾಮ ಹಲವು ಮನೆಗಳು ಜಲಾವೃತಗೊಂಡಿವೆ.

ಧಾರಾಕಾರ ಮಳೆಯಿಂದ ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಹಿನ್ನೆಲೆ ಸುಮಾರು 30,000 ಕ್ಯೂಸೆಕ್ಸ್‌ನಷ್ಟು ನೀರನ್ನು ರಾತ್ರಿ ನದಿಗೆ ಹರಿಯಬಿಡಲಾಗಿದೆ. ಪರಿಣಾಮ ಕುಶಾಲನಗರದ ಸಾಯಿ ಹಾಗೂ ಕುವೆಂಪು ಬಡಾವಣೆಗಳು ಮುಳುಗಡೆಯಾಗಿವೆ. ಮಂಗಳವಾರ ರಾತ್ರಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆ ಮನೆಯಲ್ಲಿದ್ದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಪ್ರತಿವರ್ಷ ಅವಾಂತರ ಸೃಷ್ಟಿಯಾಗುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳದಿರುವ ಹಿನ್ನೆಲೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ