ಕೊಡಗು

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ ಬಾಕಿಯಿದೆ.

ತೀರ್ಥೋದ್ಭವ ಹಿನ್ನೆಲೆಯಲ್ಲಿ ಭಾಗಮಂಡಲ ಹಾಗೂ ತಲಕಾವೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಸಿದ್ಧತೆಗಳು ಭರದಿಂದ ಸಾಗುತ್ತಿವೆ.

ಭಕ್ತರು ಹಾಗೂ ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ಮೂಲಸೌಕರ್ಯ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.

ಕ್ಷೇತ್ರ ವ್ಯಾಪ್ತಿಯಲ್ಲಿನ ಅಗತ್ಯ ಕೆಲಸ ಕಾರ್ಯಗಳಿಗಾಗಿ ಕಾವೇರಿ ನೀರಾವರಿ ನಿಗಮದ ಮೂಲಕ 2 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.

ತೀರ್ಥೋದ್ಭವ ಹಿನ್ನೆಲೆಯಲ್ಲಿ ರಸ್ತೆ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಭಕ್ತರ ಸುರಕ್ಷತೆ ಹಾಗೂ ಸುಗಮ ದರ್ಶನಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.

ತೀರ್ಥೋದ್ಭವಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲಾಡಳಿತದಿಂದ ಸಿದ್ಧತೆ ಕೈಗೊಳ್ಳಲಾಗುತ್ತಿದೆ.

ಈ ಕುರಿತು ಕೊಡಗು ಜಿಲ್ಲಾಧಿಕಾರಿ ಸೋಮಶೇಖರ್ ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

7 mins ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

12 mins ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

48 mins ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

5 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

5 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

5 hours ago