ಮಡಿಕೇರಿ : ಕೊಡಗಿನ ಕುಲದೇವಿ, ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತಲಕಾವೇರಿಗೆ ಭಕ್ತ ಸಾಗರವೇ ಹರಿದು ಬರುತ್ತಿದೆ.
ಸಾಂಪ್ರದಾಯಿಕ ಉಡುಪಿನಲ್ಲಿ ಮೂಲನಿವಾಸಿ ಮಹಿಳೆಯರು ಆಗಮಿಸುತ್ತಿದ್ದು, ಹಾಡು ನೃತ್ಯದ ಮೂಲಕ ದಕ್ಷಿಣ ಗಂಗೆ ಕಾವೇರಿಯ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ. ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್‌ಇಡಿ ಪರದೆಗಳ ವ್ಯವಸ್ಥೆ ಹಾಗೂ ಭಕ್ತರನ್ನು ಭಾಗಮಂಡಲದಿಂದ ತಲಕಾವೇರಿಗೆ ಕರೆದೊಯ್ಯಲು ಬಸ್ ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…