ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್‌ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ.
ಕಾಂತೂರು ನಿವಾಸಿ ಪತ್ನಿ ನವೀನ ಹಾಗೂ ಇರಾನ್ ಮೂಲದ ಪತಿ ನಾದರ್ ಕೊಡಗಿನಲ್ಲಿಯೇ ಸಿಲುಕಿರುವ ದಂಪತಿ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಹಲವು ದೇಶಗಳ ವಾಯು ಪ್ರದೇಶ ಬಂದ್ ಆಗಿದ್ದು, ವಿಮಾನ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಹೀಗಾಗಿ ದಂಪತಿ ಕೊಡಗಿನಲ್ಲಿಯೇ ಉಳಿಯುವಂತಾಗಿದೆ.
ಕೊಡಗಿನ ನವೀನ ಅವರು ಸುಮಾರು ೪೦ ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಇರಾನಿನ ಪ್ರಜೆ ನಾದರ್ ಅವರೊಂದಿಗೆ ಪರಿಚಯವಾಗಿ ಬಳಿಕ ವಿವಾಹವಾಗಿದ್ದರು. ವಿವಾಹದ ನಂತರ ದಂಪತಿ ಇರಾನಿನ ಬೋಜ್‌ನೂರ್ ಪ್ರದೇಶದಲ್ಲಿ ನೆಲೆಸಿದ್ದು, ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಒಬ್ಬರು ಸಿವಿಲ್ ಇಂಜಿನಿಯರ್ ಆಗಿದ್ದು, ಮತ್ತೊಬ್ಬರು ಆರ್ಕಿಟೆಕ್ಟ್ ಆಗಿದ್ದಾರೆ.
ಈ ಕುಟುಂಬವು ಇರಾನಿನಲ್ಲಿ ದಾಳಿಂಬೆ, ಗ್ರೇಪ್, ಆಪಲ್, ಬ್ಲೂಬೆರಿ, ಬಾದಾಮಿ, ಏಪ್ರಿಕೋಟ್, ಖರ್ಜೂರ, ಪಿಸ್ತಾ ಸೇರಿದಂತೆ ಹಲವು ವಿದೇಶಿ ಹಣ್ಣುಗಳ ಫಾರ್ಮ್‌ಗಳನ್ನು ಹೊಂದಿದ್ದು, ಜೊತೆಗೆ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದಾರೆ. ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ಕೊಡಗಿಗೆ ಬರುವ ಈ ದಂಪತಿ, ಸಾಮಾನ್ಯವಾಗಿ ಮಾರ್ಚ್‌ನಲ್ಲಿ ಮರಳಿ ಇರಾನ್‌ಗೆ ತೆರಳುತ್ತಿದ್ದರು.
ಈ ಬಾರಿ ಡಿಸೆಂಬರ್‌ನಲ್ಲಿ ಕೊಡಗಿಗೆ ಬಂದಿದ್ದ ಇವರು ಮಾ.೧೬ರಂದು ಬೆಂಗಳೂರಿನಿಂದ ಶಾರ್ಜಾ ಮೂಲಕ ಇರಾನ್‌ನ ಬೋಜ್‌ನೂರ್‌ಗೆ ತೆರಳಲು ವಿಮಾನ ಟಿಕೆಟ್ ಬುಕ್ ಮಾಡಿದ್ದರು. ಆದರೆ ಇಸ್ರೇಲ್, ಅಮೆರಿಕಾ-ಇರಾನ್ ಯುದ್ಧದ ಪರಿಣಾಮವಾಗಿ ವಿಮಾನ ರದ್ದುಪಡಿಸಲಾಯಿತು. ನಂತರ ಏಪ್ರಿಲ್ ೧೫ರಂದು ಮತ್ತೊಮ್ಮೆ ಪ್ರಯಾಣ ಬುಕ್ ಮಾಡಿದ್ದರೂ, ಆ ವಿಮಾನವೂ ರದ್ದಾಗಿದೆ.
ಇರಾನ್‌ಗೆ ತೆರಳುವಲ್ಲಿ ಇನ್ನಷ್ಟು ವಿಳಂಬವಾದರೆ ಮೇ ತಿಂಗಳಲ್ಲಿ ಇವರ ಪಾಸ್‌ಪೋರ್ಟ್ ಅವಧಿ ಮುಗಿಯುವ ಆತಂಕವೂ ಎದುರಾಗಿದೆ. ಇದಕ್ಕೂ ಮೀರಿ, ಯುದ್ಧ ಪರಿಸ್ಥಿತಿಯಿಂದ ಇರಾನಿನಲ್ಲಿ ಇಂಟರ್‌ನೆಟ್ ಸೇವೆಗಳು ಬಹುತೇಕ ಸ್ಥಗಿತಗೊಂಡಿರುವುದರಿಂದ ಅಲ್ಲಿ ಇರುವ ತಮ್ಮ ಮಕ್ಕಳನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲವೆಂದು ನವೀನ್ ಹಾಗೂ ನಾದರ್ ದಂಪತಿ ಆತಂಕ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ವಾರಗಳಲ್ಲಿ ಇರಾನಿನಲ್ಲಿ ಇಂಟರ್‌ನೆಟ್ ಸಂಪರ್ಕ ತೀವ್ರವಾಗಿ ಕುಸಿದಿರುವ ವರದಿಗಳೂ ಹೊರಬಿದ್ದಿವೆ.
ಈ ಅನಿರೀಕ್ಷಿತ ಪರಿಸ್ಥಿತಿಯಿಂದ ತಮ್ಮ ವ್ಯವಹಾರ, ಕುಟುಂಬ ಹಾಗೂ ಪ್ರಯಾಣ ಯೋಜನೆಗಳು ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿವೆ ಎಂದು ದಂಪತಿ ನೋವು ವ್ಯಕ್ತಪಡಿಸಿದ್ದಾರೆ.
ವಿಶೇಷ ವರದಿ: ಪುತ್ತರಿರ ಕರುಣ್ ಕಾಳಯ್ಯ
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…