ಮಡಿಕೇರಿ: ನಾಗರಹೊಳೆ ಉದ್ಯಾನವನದಂಚಿನ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಭಾನುವಾರ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.
ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದ ಬಾಳೇರ ನಂಜಪ್ಪ ಎಂಬುವವರಿಗೆ ಸೇರಿದ ಹಸುವನ್ನು ಕಾಡಂಚಿನ ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ವೇಳೆ ಹುಲಿ ದಾಳಿ ನಡೆಸಿ ಕೊಂದು, ಅನತಿ ದೂರಕ್ಕೆ ಎಳೆದೊಯ್ದು ಬಿಟ್ಟು ಹೋಗಿದೆ.