ಕೊಡಗು

ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯಲ್ಲಿ ಬಿರುಕು ; ಕುಸಿಯುವ ಭೀತಿ

ಮಡಿಕೇರಿ : ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಡಿಕೇರಿ ಸಮೀಪ ನಿರ್ಮಿಸಿದ್ದ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕುಸಿಯುವ ಭೀತಿ ಸೃಷ್ಟಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ತಡೆಗೋಡೆ ಕಳಭಾಗದ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ 2018ರಲ್ಲಿ ಸಂಭವಿಸಿದ ಜಲಸ್ಛೋಟ ಮತ್ತು ಭೂಕುಸಿತದಲ್ಲಿ ಹಲವು ಪ್ರದೇಶಗಳು ಅಪಾಯಕ್ಕೆ ಸಿಲುಕಿದ್ದವು. ಮಡಿಕೇರಿ ನಗರದ ಸಮೀಪ ಮಂಗಳೂರಿಗೆ ತೆರಳುವ ಹದ್ದಾರಿ ಕೂಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಪ್ರತಿ ವರ್ಷ ಭೂಕುಸಿತ ಉಂಟಾಗುವ ಅಪಾಯವಿದ್ದ ಕಾರಣ ಬೃಹತ್ ತಡೆಗೋಡೆಯನ್ನು ನಿರ್ಮಿಸಿತ್ತು. ಆದರೆ ಕಳೆದ ಒಂದು ತಿಂಗಳಿನಿಂದ ಮಡಿಕೇರಿ ತಾಲ್ಲೂಕಿನಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿರುವುದರಿಂದ ಮಂಗಳೂರು ರಸ್ತೆಯ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.

ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಸುರಕ್ಷತೆಯ ದೃಷ್ಟಿಯಿಂದ ತಡೆಗೋಡೆ ಕಳಭಾಗದ ನಿವಾಸಿಗಳನ್ನು ರೆಡ್ ಕ್ರಾಸ್ ಸಂಸ್ಥೆಯ ಭವನಕ್ಕೆ ಸ್ಥಳಾಂತರಿಸಿದ್ದಾರೆ. ರೆಡ್ ಕ್ರಾಸ್ ಭವನದಲ್ಲಿ ಆಶ್ರಯ ಪಡೆದಿರುವ ನಿವಾಸಿಗಳನ್ನು ಕಂದಾಯ ಇಲಾಖೆ ಹಾಗೂ ನಗರಸಭೆಯ ಅಧಿಕಾರಿಗಳು ಭೇಟಿ ಮಾಡಿ ಧೈರ್ಯ ತುಂಬಿದರು. ಊಟ, ಉಪಹಾರ ಸೇರಿದಂತೆ ಮೂಲಭೂತ ಸೌಲಭ್ಯವನ್ನು ಕಲ್ಪಿಸಲಾಗಿದೆ.

ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಬ್ಯಾರಿಕೇಡ್‌ಗಳನ್ನು ಅಳವಡಿಸುವ ಮೂಲಕ ವಾಹನಗಳ ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ. ಅಧಿಕ ತೂಕ ಸಾಮಾರ್ಥ್ಯದ ವಾಹನಗಳ ಸಂಚಾರವನ್ನು ಜಿಲ್ಲಾಡಳಿತ ಈಗಾಗಲೇ ನಿಷೇಧಿಸಿದೆ.

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

2 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

3 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

3 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

4 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

4 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

10 hours ago