ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ ಸುಮಾರು 104 ಮೊಬೈಲ್‌ಗಳನ್ನು ಪತ್ತೆಹಚ್ಚಿದ್ದು, ಮಂಗಳವಾರ ವಾರಿಸುದಾರರಿಗೆ ಮೊಬೈಲ್‌ಗಳನ್ನು ಹಸ್ತಾಂತರಿಸಲಾಯಿತು.
ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಸಿಇಐಆರ್ ಪೋರ್ಟಲ್ ಮೂಲಕ ಕಳೆದುಹೋಗಿದ್ದ ಮೊಬೈಲ್‌ಗಳನ್ನು ಪತ್ತೆಹಚ್ಚಲಾಗಿದೆ. ಅಂದಾಜು 11 ಲಕ್ಷ ಮೌಲ್ಯದ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. 2021, 2022 ಸೇರಿದಂತೆ 2025ರಲ್ಲಿ ಹೆಚ್ಚಾಗಿ ಕಳೆದಿದ್ದ ಮೊಬೈಲ್‌ಗಳನ್ನು ಪತ್ತೆ ಹಚ್ಚಲಾಗಿದೆ. ಕರ್ನಾಟಕ ಮಾತ್ರವಲ್ಲದೆ, ತಮಿಳುನಾಡು, ಕೇರಳ ರಾಜ್ಯದಿಂದಲೂ ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.
ಸಾರ್ವಜನಿಕರು ತಮ್ಮ ಮೊಬೈಲ್ ಕಳೆದುಕೊಂಡಲ್ಲಿ ಸಮೀಪದ ಪೊಲೀಸ್ ಠಾಣೆಗೆ ಹೋಗಿ ದೂರು ಸಲ್ಲಿಸಬಹುದು. ಅದಕ್ಕಿಂತಲೂ ಉತ್ತಮ ಸಿಇಐಆರ್ ಪೋರ್ಟಲ್. ಕಳೆದುಹೋಗಿರುವ ಮೊಬೈಲ್‌ಗಳ ಮಾಹಿತಿಯನ್ನು ಪೋರ್ಟಲ್‌ನಲ್ಲಿ ಹಾಕಿದ್ದರೆ ಪತ್ತೆಹಚ್ಚಲು ಸಹಕಾರಿಯಾಗಲಿದೆ ಎಂದರು.
ಕಳೆದ ಒಂದು ತಿಂಗಳಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕಾರ್ಯಾಚರಣೆ ನಡೆಸಿದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ ಅಭಿನಂದನೆ ತಿಳಿಸುವುದಾಗಿ ಮಾಹಿತಿ ನೀಡಿದರು.
ಸೈಬರ್ ಕ್ರೈಂ ಡಿವೈಎಸ್‌ಪಿ ತಳವಾರ, ಡಿವೈಎಸ್‌ಪಿ ಸೂರಜ್, ವೃತ್ತ ನಿರೀಕ್ಷಕರಾದ ಮೇದಪ್ಪ, ರಾಜು, ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಟೆಹರಾನ್: ಟೆಹರಾನ್ ಮೇಲೆ ಅಮೇರಿಕಾ ನಡೆಸಿದ ಬೃಹತ್ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳನ್ನು ಹತ್ಯೆ ಮಾಡಲಾಗಿದೆ. ಈ…
ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ…
ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…
ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…