ಮಡಿಕೇರಿ: ಆನ್‌ಲೈನ್ ವಂಚಕರಿಗೆ ಗ್ರಾಹಕರ ಬದಲಿ ಸಿಮ್ ಕಾರ್ಡ್‌ಗಳನ್ನು ಸರಬರಾಜು ಮಾಡುತ್ತಿದ್ದ ಮಡಿಕೇರಿಯ ಸಿಮ್ ಡಿಸ್ಟ್ರಿಬ್ಯೂಟರ್ ಅಬ್ದುಲ್ ರೋಷನ್ ಎಂಬಾತನನ್ನು ಕೇರಳದ ಮಲಪ್ಪುರಂನ ಸೈಬರ್ ಪೊಲೀಸರು ಬುಧವಾರ ರಾತ್ರಿ ( ಮೇ 8 ) ಬಂಧಿಸಿದ್ದಾರೆ.
2018ರಿಂದ ಏರ್‌ಟೆಲ್ ಸಿಮ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ನಿರ್ವಹಿಸಿದ್ದ ಆರೋಪಿ ಸದ್ಯ ಜಿಯೊ ಸಿಮ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ವೆಂಗಾರ ಮೂಲಕ ವ್ಯಕ್ತಿ ನೀಡಿದ ದೂರಿನ ತನಿಖೆ ವೇಳೆ ಈತ ನಡೆಸುತ್ತಿದ್ದ ದಂಧೆ ಬೆಳಕಿಗೆ ಬಂದಿದೆ.
ಬಂಧನದ ವೇಳೆ 40,000 ಸಿಮ್ ಕಾರ್ಡ್‌ಗಳು, 180 ಮೊಬೈಲ್ ಫೋನ್‌ಗಳು ಹಾಗೂ 6 ಬಯೋಮೆಟ್ರಿಕ್ ಸಾಧನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾರ್ಚ್‌ನಲ್ಲಿಯೇ ದಾಖಲಾಗಿತ್ತು ದೂರು:
ವೆಂಗಾರ ಮೂಲದ ವ್ಯಕ್ತಿ ಮಾರ್ಚ್ 10ರಂದು ಆನ್‌ಲೈನ್ ಟ್ರೇಡಿಂಗ್‌ನಲ್ಲಿ 1.08 ಕೋಟಿ ರೂಪಾಯಿ ವಂಚನೆಗೆ ಒಳಗಾಗಿ ಈ ಸಂಬಂಧ ದೂರನ್ನು ದಾಖಲಿಸಿದ್ದರು. ಈ ದೂರಿನ ಮೇರೆಗೆ ತನಿಖೆ ಆರಂಭಿಸಿದಾಗ ವಂಚಕರಿಗೆ ಅಬ್ದುಲ್ ರೋಷನ್ ಸಿಮ್ ಕಾರ್ಡ್ ಸರಬರಾಜು ಮಾಡುತ್ತಿದ್ದ ಮಾಹಿತಿ ಬೆಳಕಿಗೆ ಬಂದಿದೆ.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…