ಕೊಡಗು: ದಸರಾ ಹಬ್ಬದ ಪ್ರಯುಕ್ತ ರಜೆ ನೀಡಿರುವ ಹಿನ್ನೆಲೆಯಲ್ಲಿ ಕೊಡಗಿನತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಲಕ್ಷಾಂತರ ಮಂದಿ ಪ್ರವಾಸಿಗರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಪ್ರವಾಸಿ ತಾಣಗಳಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಮಕ್ಕಳು ಹಾಗೂ ಪೋಷಕರು ಸೇರಿದಂತೆ ಮನೆಯ ಕುಟುಂಬಸ್ಥರು ಕೊಡಗಿನ ಪ್ರವಾಸಿ ತಾಣಗಳಿಗೆ ತೆರಳಿ ಎಂಜಾಯ್ ಮಾಡುತ್ತಿದ್ದಾರೆ.
ಅದರಲ್ಲೂ ಮಡಿಕೇರಿಯಯಲ್ಲಂತೂ ಬೆಳಿಗ್ಗೆಯಿಂದ ಸಂಜೆವರೆಗೂ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಇನ್ನು ನಾಳೆಯಿಂದ ಭಾನುವಾರದವರೆಗೆ ಸರ್ಕಾರಿ ರಜೆ ಇರುವ ಕಾರಣ ಕೊಡಗು ಜಿಲ್ಲೆಗೆ ಮತ್ತಷ್ಟು ಪ್ರವಾಸಿಗರು ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಕೊಡಗಿನ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಕೊಠಡಿಗಳು ಕೂಡ ಬುಕ್ ಆಗಿವೆ.