ಕೊಡಗು

ಕೊಡಗು| ಕಾವೇರಿ ನದಿ ಮಾಲಿನ್ಯ ತಡೆಗೆ ತಂಡ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಮಡಿಕೇರಿ: ನಾಡಿನ ಜೀವನದಿ ಕಾವೇರಿ ನದಿಯ ಮಾಲಿನ್ಯ ಮತ್ತು ನದಯ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಭಾಗಮಂಡಲದಲ್ಲಿ ಇಂದು(ಮಾರ್ಚ್.‌21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಶ್ವ ಜಲದಿನದ ಪ್ರಯುಕ್ತ ಒಂದು ವಾರಗಳ ಕಾಲ ಜಲ ಸಂರಕ್ಷಣೆ ಅಭಿಯಾನ ನಡೆಯಲಿದೆ. ಈ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಕಾವೇರಿ ಆರತಿ ಆಯೋಜಿಸಲಾಗಿದೆ. ಈ ಆರತಿಯ ಪ್ರಮುಖ ಉದ್ದೇಶವೆಂದರೆ ನೀರಿನ ದುರ್ಬಳಕೆ ತಡೆಗಟ್ಟಿ, ಸದ್ಬಳಕೆ ಮಾಡುವಂತೆ ಜಾಗೃತಿ ಮೂಡಿಸುವುದಾಗಿದೆ ಎಂದರು.

ಕಾವೇರಿ ಆರತಿಗಾಗಿ ರಾಜ್ಯ ಸರ್ಕಾರದಿಂದ ಈಗಾಗಲೇ ಹಣ ಮೀಸಲಿಡಲಾಗಿದೆ. ಹಾಗಾಗಿಯೇ ಇಂದು ಕಾವೇರಿ ಆರತಿಯನ್ನು ಏರ್ಪಡಿಸಲಾಗಿದೆ. ಈ ಸಂದರ್ಭದಲ್ಲಿ ಜನರು ಆನ್‌ಲೈನ್‌ ಮೂಲಕ ಈ ನಾಡಿನ ನೀರನ್ನು ಉಳಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಬಹುದು ಎಂದು ಹೇಳಿದರು.

ಇನ್ನು ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು, ರಾಜಕಾರಣಿಗಳು ಹಾಗು ಸಚಿವರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಅರ್ಚನ ಎಸ್‌ ಎಸ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

8 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

9 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

9 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

10 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

10 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

14 hours ago