Mysore
14
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಪುಣ್ಯಕ್ಷೇತ್ರ ತಲಕಾವೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌: ಕಾವೇರಿ ಮಾತೆಗೆ ವಿಶೇಷ ಪೂಜೆ

ಮಡಿಕೇರಿ: ಇಂದು ಸಂಜೆ ಬೆಂಗಳೂರಿನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾವೇರಿ ತೀರ್ಥ ತೆಗೆದುಕೊಂಡು ಹೋಗಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್‌ನಲ್ಲಿ ಇಂದು ಸಂಜೆ ಕಾವೇರಿ ಆರತಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಹೆಲಿಕಾಪ್ಟರ್‌ನಲ್ಲಿ ತಲಕಾವೇರಿಗೆ ಆಗಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಜೀವನದಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸೇರಿದಂತೆ ಹಲವು ಕಾಂಗ್ರೆಸ್‌ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಳಿಕ ತಾಯಿ ಕಾವೇರಿಯ ಪವಿತ್ರ ತೀರ್ಥದೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಳೂರಿಗೆ ತೆರಳಲಿದ್ದು, ಸಂಜೆ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Tags:
error: Content is protected !!