ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾರ್ಚ್.21ರಂದು ತಲಕಾವೇರಿಗೆ ಭೇಟಿ ನೀಡಲಿದ್ದು, ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಅಂದು ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಭಾಗಮಂಡಲಕ್ಕೆ ಡಿಸಿಎಂ ಡಿಕೆಶಿ ಆಗಮಿಸಲಿದ್ದು, ರಸ್ತೆ ಮಾರ್ಗದ ಮೂಲಕ ಜೀವನದಿ ಕಾವೇರಿ ಉಗಮ ಸ್ಥಾನಕ್ಕೆ ತೆರಳಲಿದ್ದಾರೆ.
ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬೆಂಗಳೂರಿನಲ್ಲಿ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಕಾವೇರಿ ತೀರ್ಥ ಸಂಗ್ರಹಿಸಿ ಬೆಂಗಳೂರಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸಾಥ್ ನೀಡಲಿದ್ದಾರೆ.





