ಕೊಡಗು

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು, ಕೊನೆಗೆ ಸಾವನ್ನಪ್ಪುತ್ತಿರುವ ಘಟನೆಗಳು ನಡೆಯುತ್ತಿದೆ. ಈ ಅಜ್ಞಾತ ಮಾರಕ ರೋಗದಿಂದಾಗಿ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಪಾಲೂರು ಗ್ರಾಮದ ನಿವಾಸಿ ಹಾಗೂ ರೈತ ಸೂದನ ಎಸ್.ಈರಪ್ಪ ಅವರು ಮಾತನಾಡಿ, “ಆರೋಗ್ಯವಂತ ಹಸುಗಳ ಕಾಲುಗಳು ದಿನೇದಿನ ಕೃಶವಾಗುತ್ತಾ ಬರುತ್ತಿವೆ. ಇದರಿಂದ ರಾಸುಗಳು ಕ್ರಮೇಣ ಸಾವಿಗೀಡಾಗುತ್ತಿವೆ. ಈ ರೋಗದ ಬಗ್ಗೆ ರೈತರು ಬಹಳ ಕಂಗಾಲಾಗಿದ್ದಾರೆ” ಎಂದು ವಿವರಿಸಿದರು.

ಪಾಲೂರು ಹಾಗೂ ಸಮೀಪದ ಹಳ್ಳಿಗಳಲ್ಲಿ ಹೈನುಗಾರಿಕೆಯನ್ನು ಪ್ರಮುಖ ಉದ್ಯಮವನ್ನಾಗಿ ಮಾಡಿಕೊಂಡಿರುವ ರೈತರು ಈ ರೋಗಕ್ಕೆ ಪರಿಹಾರ ಕಾಣದೆ ತೊಂದರೆಗೆ ಒಳಗಾಗಿದ್ದಾರೆ. ಪಶು ವೈದ್ಯಕೀಯ ಇಲಾಖೆಯವರು ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ರೋಗದ ಲಕ್ಷಣಗಳು ಮತ್ತು ಕಾರಣಗಳ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದೆ ರೈತರು ಹೆಚ್ಚು ಆತಂಕಕ್ಕೆ ಒಳಗಾಗಿದ್ದಾರೆ.

ಈ ಸಮಸ್ಯೆಗೆ ತಕ್ಷಣ ಗಮನ ಹರಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರೋಗದ ನಿರ್ಣಯ, ಚಿಕಿತ್ಸೆ ಹಾಗೂ ರೈತರಿಗೆ ಸೂಕ್ತ ನೆರವು ನೀಡಬೇಕೆಂದು ಅವರು ವಿನಂತಿಸಿಕೊಂಡಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

4 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

4 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

5 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

5 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

5 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

6 hours ago