Mysore
23
moderate rain

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ಸಾಲಬಾಧೆ : ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಮಡಿಕೇರಿ : ಸಾಲಭಾದೆಯಿಂದ ಮನನೊಂದು ವ್ಯಕ್ತಿಯೊಬ್ಬ ಗುಂಡಿ ಹಾರಿಸಿಕೊಂಡಿ ಸಾವಿಗೆ ಶರಣಾದ ದಾರುಣ ಘಟನೆ ಜಿಲ್ಲೆಯ ನಾಪೋಕ್ಲು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಾಪೋಕ್ಲು ವ್ಯಾಪ್ತಿಯ ನೆಲಜಿ ಗ್ರಾಮದ ನಿವಾಸಿ ಚಿಯಕ ಪೂವಂಡ ರಂಜು ತಿಮ್ಮಯ್ಯ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಸಾಲಬಾಧೆಯಿಂದ ಖಿನ್ನತೆಗೆ ಒಳಗಾಗಿದ್ದ ತಿಮ್ಮಯ್ಯ ಇಂದು(ಮಾ.25) ಬೆಳಿಗ್ಗೆ ನೆಲಜಿ ಗ್ರಾಮದ ತಮ್ಮ ಮನೆ ಸಮೀಪದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಂಜು ತಿಮ್ಮಯ್ಯ ಅವರ ಪತ್ನಿ ತಾರಾಮಣಿ ಅವರು ನೀಡಿದ ದೂರಿನ ಅನ್ವಯ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:
error: Content is protected !!