ಮಡಿಕೇರಿ : ಐತಿಹಾಸಿಕ ಹಿನ್ನೆಲೆಯ ಮೈಸೂರು ದಸರಾ ಉತ್ಸವದ ಉದ್ಘಾಟನೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಬೂಕರ್ ಪ್ರಶಸ್ತಿಗೆ ಭಾಜನರಾದ ಬಾನು ಮುಸ್ತಾಕ್ ಹಾಗೂ ದೀಪಾ ಭಾಸ್ತಿ ಅವರನ್ನು ಒಂದೇ ರೀತಿಯಲ್ಲಿ ನೋಡಬೇಕಿತ್ತು. ಆ ಮೂಲಕ ದೀಪಾ ಭಾಸ್ತಿ ಅವರನ್ನು ಕೂಡ ದಸರಾ ಉದ್ಘಾಟನೆಗೆ ಕರೆಯಬೇಕಾಗಿತ್ತು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಂಸದ ಅಡಗೂರು ಹೆಚ್.ವಿಶ್ವನಾಥ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಮಡಿಕೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ಕಾಕ್ ಅವರನ್ನು ಆಹ್ವಾನಿಸಿದ ಕ್ರಮ ಸರಿಯಾಗಿದೆ. ಈ ಹಂತದಲ್ಲಿ ಬೂಕರ್ ವಿಜೇತೆ ದೀಪಾ ಭಾಸ್ತಿಯವರನ್ನು ಕೂಡ ಕರೆಯಬಹುದಿತ್ತು. ಈ ಲೋಪವನ್ನು ಈಗಲೂ ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದರು.
ದಸರಾ ಉತ್ಸವದಂದು ಚಾಮುಂಡಿ ಬೆಟ್ಟದಲ್ಲಿ ಬಾನು ಮುಸ್ತಾಕ್ ಅವರಿಂದ ದಸರಾ ಉದ್ಘಾಟನೆ ಹಾಗೂ ಅರಮನೆ ಮೈದಾನದ ಕಾರ್ಯಕ್ರಮಕ್ಕೆ ಬಾನು ಮುಷ್ಕಾಕ್ ಅವರೊಂದಿಗೆ ದೀಪಾ ಭಾಸ್ತಿಯವರನ್ನು ಆಹ್ವಾನಿಸಿ ದೊಡ್ಡ ಕಾರ್ಯಕ್ರಮವನ್ನು ಆಯೋಚಿಸಿ ಎಂದು ಸಲಹೆ ನೀಡಿದರು.
ಕನ್ನಡದ ಹಿರಿಮೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೇರಿಸಿದ ಬೂಕರ್ ಪ್ರಶಸ್ತಿಯು ಮೂಲ ಲೇಖಕಿ ಬಾನು ಮುಷ್ಕಾಕ್ ಹಾಗೂ ಅನುವಾದಕಿ ದೀಪಾ ಭಾಸ್ತಿಯವರಿಗು ಸಂದಿದೆ. ಬೂಕರ್ ಪ್ರಶಸ್ತಿಯ ಮೂಲಕ ಕನ್ನಡ ಭಾಷೆಯನ್ನು ಇವರು ಅಂತರಾಷ್ಟ್ರೀಯ ಮಟ್ಟಕ್ಕೇರಿಸಿದ್ದಾರೆ ಎಂದರು.
ಬಹುತ್ವದ ಭಾರತದಲ್ಲಿ ಸಂವಿಧಾನವನ್ನು ಒಪ್ಪಿ ಮುನ್ನಡೆಯುತ್ತಿದ್ದೇವೆ, ಜಾಗತಿಕ ಮಟ್ಟದಲ್ಲಿ ಕನ್ನಡಕ್ಕೆ ಗೌರವ ತಂದುಕೊಟ್ಟ ಬಾನು ಮುಷ್ಕಾಕ್ ಅವರು ಕನ್ನಡದ ಮಗಳೇ ಆಗಿದ್ದಾರೆ ಎಂದು ತಿಳಿಸಿದರು.
ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಎಸ್‌ಐಟಿ ತನಿಖೆಯನ್ನು ಶೀಘ್ರು ಮುಗಿಸಬೇಕು. ಧರ್ಮಸ್ಥಳದಲ್ಲಿ ಏನಾಗಿದೆ, ಏನಾಗುತ್ತಿದೆ ಎನ್ನುವ ವಿಚಾರವನ್ನು ಜನರಿಗೆ ಸೃಷ್ಟಿಕರಣ ನೀಡಬೇಕು. ಎಸ್‌ಐಟಿ ತನಿಖೆ ಚೆನ್ನಾಗಿ ನಡೆಯುತ್ತಿದ್ದು, ಎನ್‌ಐಎ ತನಿಖೆಯ ಅಗತ್ಯವಿಲ್ಲವೆಂದು ಹೆಚ್.ವಿಶ್ವನಾಥ್ ಹೇಳಿದರು.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…