ಕೊಡಗು

ಪರಿಹಾರ ನೀಡಲು ವಿಳಂಬ : ನ್ಯಾಯಾಲಯದಿಂದ ಕೆಎಸ್​ಆರ್​ಟಿಸಿ ಬಸ್​ ಜಪ್ತಿ

ಕೊಡಗು : ಅಪಘಾತ ವಿಮೆ ಪರಿಹಾರ ನೀಡುವಲ್ಲಿ ಕೆಎಸ್​ಆರ್​ಟಿಸಿ ಸಂಸ್ಥೆ ವಿಫಲವಾದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಅನ್ನು ನ್ಯಾಯಾಲಯ ಜಪ್ತಿ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಇಲ್ಲಿನ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಬಸ್​ ಅನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. 2010ರಲ್ಲಿ ವಿರಾಜಪೇಟೆ ನಗರದ ನಿವಾಸಿ ಮುನಾವರ್ ತಮ್ಮ ಕುಟುಂಬದವರೊಂದಿಗೆ ಸ್ಯಾಂಟ್ರೋ ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದರು. ಈ ಸಂದರ್ಭ ಹುಣಸೂರು ತಾಲ್ಲೂಕಿನ ಕಲ್ಲಬೆಟ್ಟ ಬಳಿ ಎದುರಿನಿಂದ ವೇಗವಾಗಿ ಬಂದ ಕೆಎಸ್​ಆರ್​ಟಿಸಿ ಬಸ್​ ಕಾರಿಗೆ ಬಲವಾಗಿ ಅಪ್ಪಳಿಸಿತ್ತು. ಪರಿಣಾಮ ಮುನಾವರ್​ ಸಾವನ್ನಪ್ಪಿದ್ದರು.

ಅಪಘಾತದ ಬಳಿಕ ನ್ಯಾಯಾಲಯದಲ್ಲಿ ವಿಚಾರಣೆಯಾಗಿ ಮುನಾವರ್​ ಕುಟುಂಬಕ್ಕೆ ಕೆಎಸ್​ಆರ್​ಟಿಸಿ ಪರಿಹಾರವನ್ನೂ ನೀಡಿತ್ತು. ಆದರೆ ಸಂಪೂರ್ಣ ಜಖಂಗೊಡಿದ್ದ ಕಾರಿಗೂ ವಿಮಾ ಪರಿಹಾರ ಹಣ ನೀಡುವಂತೆ ಮುನಾವರ್ ಪತ್ನಿ ಫಾತಿಮಾ ಅಫ್ಸರ್​ ವಿರಾಜಪೇಟೆ ಹೆಚ್ಚುವರಿ ಸೆಷನ್ಸ್​ ನ್ಯಾಲಾಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿದಾರರಿಗೆ ವಿಮಾ ಪರಿಹಾರ ಹಣ ರೂ 1,48,130 ಪಾವತಿಸುವಂತೆ ಆದೇಶ ಮಾಡಿತ್ತು.

ಇದನ್ನು ಪ್ರಶ್ನಿಸಿ ಕೆಎಸ್​ಆರ್​ಟಿಸಿ, ಹೈಕೋರ್ಟ್​ ಮೊರೆ ಹೋಗಿತ್ತು. ಆದರೆ ಹೈಕೋರ್ಟ್​ ಕೆಎಸ್​ಆರ್​ಟಿಸಿ ಅರ್ಜಿಯನ್ನು ತಳ್ಳಿಹಾಕಿದ್ದು, ನ್ಯಾಯಾಲಯದ ಆದೇಶ ಪಾಲಿಸುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವಿರಾಜಪೇಟೆ ನ್ಯಾಯಾಲಯ 2021ರ ಮಾರ್ಚ್​ನಲ್ಲಿ ಅಪಘಾತ ಪರಿವಹಾರ ವಿಮಾ ಹಣ ಪಾವತಿಸುವಂತೆ ಸಾರಿಗೆ ನಿಗಮಕ್ಕೆ ಬಹಳಷ್ಟು ಬಾರಿ ಸೂಚಿಸಿತ್ತು. ಆದರೂ ನಿಗಮ ನ್ಯಾಯಾಲಯದ ಆದೇಶವನ್ನು ನಿರ್ಲಕ್ಷ್ಯ ಮಾಡುತ್ತಲೇ ಬಂದಿತ್ತು.

ಈ ಹಿನ್ನೆಲೆಯಲ್ಲಿ ವಿರಾಜಪೇಟೆ ಹೆಚ್ಚುವರಿ ನ್ಯಾಯಾಲಯ ಇದೀಗ ಸಾರಿಗೆ ಬಸ್​ ಅನ್ನೇ ಜಪ್ತಿ ಮಾಡುವಂತೆ ಆದೇಶ ಮಾಡಿತು. ಈ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ವಿರಾಜಪೇಟೆ ಬಸ್​ ನಿಲ್ದಾಣಕ್ಕೆ ತೆರಳಿ ಪ್ರಕರಣಕ್ಕೆ ಸಂಬಂಧಪಟ್ಟ ಕೊಳ್ಳೇಗಾಲ ಡಿಪೋಕ್ಕೆ ಸೇರಿದ ಬಸ್​ ಅನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ ಪರವಾಗಿ ವಿರಾಜಪೇಟೆ ವಕೀಲ ಟಿಪಿ ಕೃಷ್ಣ. ರಾಕೇಶ್ ಹಾಗೂ ಸಿ. ದರ್ಶನ್​ ವಾದ ಮಂಡಿಸಿದ್ದರು.

lokesh

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

52 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

59 mins ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

1 hour ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

1 hour ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

1 hour ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

1 hour ago